Electric vehicle: ಕಳೆದ ಹಣಕಾಸು ವರ್ಷದಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಮೂರು ಪಟ್ಟು ಹೆಚ್ಚಾಗಿದೆ
Electric vehicle : ಕಳೆದ ಹಣಕಾಸು ವರ್ಷದಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಮೂರು ಪಟ್ಟು ಹೆಚ್ಚಾಗಿದೆ ಎಂದು ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ತಿಳಿಸಿದೆ.
ನವದೆಹಲಿ : ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ಪ್ರಕಾರ, 2021-22ನೇ ಹಣಕಾಸು ವರ್ಷದಲ್ಲಿ ನಾಲ್ಕು ಲಕ್ಷದ 29 ಸಾವಿರದ 217 ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡಲಾಗಿದೆ. 2020-21ನೇ ಹಣಕಾಸು ವರ್ಷದಲ್ಲಿ ಕೇವಲ ಒಂದು ಲಕ್ಷದ 34 ಸಾವಿರದ 821 ಎಲೆಕ್ಟ್ರಿಕ್ ವಾಹನಗಳು ಮಾರಾಟವಾಗಿವೆ. ಇವುಗಳಲ್ಲಿ ಹೆಚ್ಚಿನ ದ್ವಿಚಕ್ರ ವಾಹನಗಳು ಮಾರಾಟವಾಗಿವೆ.
ಕಳೆದ ವರ್ಷ ಎರಡು ಲಕ್ಷ 31 ಸಾವಿರದ 338 ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಮಾರಾಟವಾಗಿವೆ. ದ್ವಿಚಕ್ರ ವಾಹನ ಮಾರಾಟದಲ್ಲಿ ಹೀರೋ ಎಲೆಕ್ಟ್ರಿಕ್ ಮೊದಲ ಸ್ಥಾನ, ಓಕಿನಾವಾ ಎರಡನೇ, ಆಂಪಿಯರ್ ವೆಹಿಕಲ್ಸ್ ಮೂರನೇ ಮತ್ತು ಈಥರ್ ಎನರ್ಜಿ ನಾಲ್ಕನೇ ಸ್ಥಾನದಲ್ಲಿದೆ.
ಇನ್ನು, ಒಂದು ಲಕ್ಷದ 68 ಸಾವಿರದ 300 ಎಲೆಕ್ಟ್ರಿಕ್ ಕಾರುಗಳು ಮಾರಾಟವಾಗಿವೆ. ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಷನ್ ಪ್ರಕಾರ, ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳ ಅತಿದೊಡ್ಡ ಮಾರಾಟಗಾರನಾಗಿದ್ದು, ಎಂಜಿ ಮೋಟಾರ್ಸ್, ಮಹೀಂದ್ರಾ ಮತ್ತು ಹುಂಡೈ ನಂತರದ ಸ್ಥಾನದಲ್ಲಿವೆ.
Electric vehicle sales in India tripled in the last financial year
Follow Us on : Google News | Facebook | Twitter | YouTube