ವಿಧಾನಸಭೆ ಆವರಣದಲ್ಲಿ ಖಾಲಿ ಮದ್ಯದ ಬಾಟಲಿಗಳು

ಬಿಹಾರ ವಿಧಾನಸಭೆ ಆವರಣದಲ್ಲಿ ಖಾಲಿ ಮದ್ಯದ ಬಾಟಲಿಗಳು ಪತ್ತೆಯಾಗಿರುವುದು ಸಂಚಲನ ಮೂಡಿಸಿದೆ. 

ಪಾಟ್ನಾ: ಬಿಹಾರ ವಿಧಾನಸಭೆ ಆವರಣದಲ್ಲಿ ಖಾಲಿ ಮದ್ಯದ ಬಾಟಲಿಗಳು ಪತ್ತೆಯಾಗಿರುವುದು ಸಂಚಲನ ಮೂಡಿಸಿದೆ. ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಮಾರಾಟ ನಿಷೇಧ ಜಾರಿಯಲ್ಲಿರುವುದರಿಂದ ವಿಧಾನಸಭೆಯ ಪಾರ್ಕಿಂಗ್ ಸ್ಥಳದಲ್ಲಿ ಅಧಿಕಾರಿಗಳು ಖಾಲಿ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂಬ ವರದಿಗಳ ಬಗ್ಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಿತೀಶ್ ಸರ್ಕಾರದಲ್ಲಿರುವ ಸಚಿವರಿಗೆ ಅಪರಾಧ ಎಸಗುವ ಹಕ್ಕಿದೆ ಎಂದ ಅವರು, ಸಿಎಂ ನಿತೀಶ್ ಕುಮಾರ್ ರಾಜ್ಯದ ಜನರ ಕ್ಷಮೆ ಯಾಚಿಸಬೇಕು. ಬಿಹಾರ ವಿಧಾನಸಭೆಗೆ ಮದ್ಯದ ಬಾಟಲಿಗಳು ಹೇಗೆ ಬಂದವು ಎಂಬುದನ್ನು ತೇಜಸ್ವಿ ಪ್ರಶ್ನಿಸಿದ್ದಾರೆ. ನಿತೀಶ್ ಕುಮಾರ್ ಬಿಹಾರ ಜನತೆಯ ಕ್ಷಮೆಯಾಚಿಸಬೇಕು ಎಂದು ತೇಜಸ್ವಿ ಯಾದವ್ ಆಗ್ರಹಿಸಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today