ಕುಲ್ಗಾಮ್ ಮತ್ತು ಅನಂತನಾಗ್ನಲ್ಲಿ ಎನ್ಕೌಂಟರ್, ಒಬ್ಬ ಭಯೋತ್ಪಾದಕ ಹತ್ಯೆ
ದಕ್ಷಿಣ ಕಾಶ್ಮೀರದ ಎರಡು ಪ್ರತ್ಯೇಕ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಘರ್ಷಣೆ ನಡೆದಿದೆ. ಕುಲ್ಗಾಮ್ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಶ್ರೀನಗರ: ದಕ್ಷಿಣ ಕಾಶ್ಮೀರದ ಎರಡು ಪ್ರತ್ಯೇಕ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಘರ್ಷಣೆ ನಡೆದಿದೆ. ಕುಲ್ಗಾಮ್ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದ ಹಂಗಲ್ಗುಂಡ್ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರು ಗುಂಡಿನ ದಾಳಿಯನ್ನು ಮುಂದುವರೆಸಿದ್ದಾರೆ. ಮೂಲಗಳ ಪ್ರಕಾರ, ಭದ್ರತಾ ಪಡೆಗಳು ಪ್ರದೇಶವನ್ನು ತಲುಪಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
ಈ ಸಂದರ್ಭದಲ್ಲಿ ಉಗ್ರರು ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸದ್ಯ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ, ಬುಧವಾರ ಬೆಳಗಿನ ಜಾವ ಅನಂತ್ನಾಗ್ನಲ್ಲಿ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದರು.
ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಜ್ಬಿಹಾರದ ಬಾದಶಾಹಿ ಬಾಗ್ ಬಳಿ ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದಾಗ ಈ ದಾಳಿ ನಡೆದಿದೆ.
Encounter In Kulgam And Anantnag One Terrorist Killed
Follow Us on : Google News | Facebook | Twitter | YouTube