Explosion: ತಮಿಳುನಾಡು ಕಾಂಚೀಪುರಂ ಪಟಾಕಿ ಗೋದಾಮಿನಲ್ಲಿ ಸ್ಫೋಟ; ಒಂಬತ್ತು ಕಾರ್ಮಿಕರು ಸಾವು, 12 ಮಂದಿಗೆ ಗಾಯ

Explosion: ತಮಿಳುನಾಡಿನ ಕಾಂಚೀಪುರಂನಲ್ಲಿರುವ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ.

Bengaluru, Karnataka, India
Edited By: Satish Raj Goravigere

Explosion – ಕಾಂಚೀಪುರಂ/ತಮಿಳುನಾಡು: ತಮಿಳುನಾಡಿನ ಕಾಂಚೀಪುರಂನಲ್ಲಿರುವ (Tamil Nadu Kanchipuram) ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ (firecracker godown) ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕಾರ್ಮಿಕರು ಪಟಾಕಿ ತಯಾರಿಸುವ ಮತ್ತು ಸಂಗ್ರಹಿಸುವ ಕೆಲಸದಲ್ಲಿ ತೊಡಗಿದ್ದಾಗ ಸ್ಫೋಟ ಸಂಭವಿಸಿ, ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿ ಅವಘಡದಲ್ಲಿ ಒಂಬತ್ತು ಕಾರ್ಮಿಕರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.

ಸ್ಫೋಟದಿಂದಾಗಿ ಉತ್ಪಾದನಾ ಮತ್ತು ಶೇಖರಣಾ ಕಟ್ಟಡ ಕುಸಿದಿದೆ. ಅಪಘಾತದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ ಮತ್ತು ಉಲ್ಲಂಘನೆಗಳನ್ನು ಗುರುತಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.

Explosion in a firecracker godown in Tamil Nadu Kanchipuram