ಮೋದಿ ಮೇಲೆ ನಂಬಿಕೆ ಇಲ್ಲ..ರೈತ ಚಳವಳಿ ಮುಂದುವರಿಸುತ್ತೇವೆ: ರಾಕೇಶ್ ಟಿಕಾಯತ್

ತನಗೆ ಪ್ರಧಾನಿ ಮೇಲೆ ವಿಶ್ವಾಸವಿಲ್ಲ ಮತ್ತು ಪ್ರಸ್ತುತ ಸರ್ಕಾರದೊಂದಿಗೆ ಹೆಚ್ಚಿನ ಮಾತುಕತೆಗಾಗಿ ಕಾಯುತ್ತಿದ್ದೇನೆ ಎಂದು ಟಿಕಾಯತ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನನ್ನು ರದ್ದುಪಡಿಸುವುದಾಗಿ ಘೋಷಿಸಿದ್ದು, ರೈತರಿಗೆ ತೊಂದರೆ ನೀಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ.

ಹೊಸದಿಲ್ಲಿ: ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ಘೋಷಣೆ ಮಾಡಿದರೂ ಅವರ ಮೇಲೆ ನಂಬಿಕೆ ಇಲ್ಲ ಎಂದು ಬಿಕೆಯು ರಾಷ್ಟ್ರೀಯ ವಕ್ತಾರ ಮತ್ತು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಅವರು ಪಾಲ್ಘರ್‌ನಲ್ಲಿ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡುತ್ತಿದ್ದರು. ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದರೂ, ಅವರ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದರು.

ತನಗೆ ಪ್ರಧಾನಿ ಮೇಲೆ ವಿಶ್ವಾಸವಿಲ್ಲ ಮತ್ತು ಪ್ರಸ್ತುತ ಸರ್ಕಾರದೊಂದಿಗೆ ಹೆಚ್ಚಿನ ಮಾತುಕತೆಗಾಗಿ ಕಾಯುತ್ತಿದ್ದೇನೆ ಎಂದು ಟಿಕಾಯತ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾನೂನನ್ನು ರದ್ದುಪಡಿಸುವುದಾಗಿ ಘೋಷಿಸಿದ್ದು, ರೈತರಿಗೆ ತೊಂದರೆ ನೀಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದಾರೆ. ವಿರೋಧ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸುವ ಕಾರಣದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.