ಅನಾಥಾಶ್ರಮದಲ್ಲಿ ಅಗ್ನಿ ಅವಘಡ, ಬೆಂಕಿಯಲ್ಲಿ ಸಿಲುಕಿದ ಆರು ಮಕ್ಕಳು

ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಗನ್ನವರಂನಲ್ಲಿರುವ ಲಿಟಲ್ ಲೈಟ್ಸ್ ಅನಾಥಾಶ್ರಮದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

  • ಅನಾಥಾಶ್ರಮದಲ್ಲಿ ಅಗ್ನಿ ಅವಘಡ
  • ಆರು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು
  • ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಿಯಂತ್ರಣ

ಅಮರಾವತಿ: ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಗನ್ನವರಂನಲ್ಲಿರುವ ಲಿಟಲ್ ಲೈಟ್ಸ್ ಅನಾಥಾಶ್ರಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಆರು ಮಕ್ಕಳು ಗಾಯಗೊಂಡಿದ್ದಾರೆ.

ಸೋಮವಾರ ಮಧ್ಯರಾತ್ರಿಯ ಸುಮಾರಿಗೆ, ವಿದ್ಯಾರ್ಥಿಗಳು ಮಲಗಿದ್ದಾಗ ಆಶ್ರಮದ ಒಂದು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಕ್ರಮೇಣ ಬೆಂಕಿ ಆಶ್ರಮವೆಲ್ಲ ಹೊತ್ತಿಕೊಳ್ಳಲು ಪ್ರಾರಂಭಿಸಿತು. ಕೂಡಲೇ ಅಲ್ಲಿನ ಸಿಬ್ಬಂದಿ ಮಕ್ಕಳನ್ನು ಸುರಕ್ಷಿತವಾಗಿ ಹೊರ ಕರೆತಂದರು. ಆದರೆ, ಈ ಅವಘಡಲ್ಲಿ ಆರು ವಿದ್ಯಾರ್ಥಿಗಳು ಒಂದು ಕೋಣೆಯಲ್ಲಿ ಸಿಕ್ಕಿಹಾಕಿಕೊಂಡಿದ್ದರು.

ಈ ಸಂದರ್ಭದಲ್ಲಿ ಸಿಬ್ಬಂದಿ ಬಾಗಿಲು ಒಡೆದು ಅವರನ್ನೂ ಸಹ ಹೊರಗೆ ತಂದರು. ಅವರನ್ನು 108 ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸುಟ್ಟಗಾಯಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಅಗ್ನಿಶಾಮಕ ದಳದ ಸಹಾಯದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಸಮಯದಲ್ಲಿ ಆಶ್ರಮದಲ್ಲಿ 140 ವಿದ್ಯಾರ್ಥಿಗಳಿದ್ದರು ಎಂದು ತಿಳಿದುಬಂದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Fire Accident at Andhra Orphanage Injures Six Children

English Summary▼

TRENDING ARTICLES1 / 4
Show More

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories