ದೆಹಲಿಯ ಅಶೋಕ್ ನಗರ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ
ರಾಷ್ಟ್ರ ರಾಜಧಾನಿ ದೆಹಲಿಯ ಅಶೋಕ್ ನಗರ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಅಶೋಕ್ ನಗರ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮಂಗಳವಾರ ಮಧ್ಯಾಹ್ನ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದವು.
ಕಟ್ಟಡದಲ್ಲಿ ಸಿಲುಕಿರುವವರನ್ನು ಹೊರತರಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಇದುವರೆಗೆ 12 ಮಂದಿಯನ್ನು ಕಟ್ಟಡದಿಂದ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗದ ಕಾರಣ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಆದರೆ, ಕಟ್ಟಡದಲ್ಲಿ ಬೆಂಕಿ ಹಾಗೂ ದಟ್ಟ ಹೊಗೆ ವ್ಯಾಪಿಸಿದ್ದರಿಂದ ಕಟ್ಟಡದಲ್ಲಿ ಎಷ್ಟು ಮಂದಿ ಸಿಲುಕಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿಲ್ಲ. ಘಟನೆಯ ಸಂಪೂರ್ಣ ವಿವರಗಳು ಇನ್ನಷ್ಟೇ ಬಹಿರಂಗವಾಗಬೇಕಿದೆ.
fire breaks out at 4 storey building in delhi
ನಿತ್ಯಾ ಮೆನನ್ ಮದುವೆ ನಿಶ್ಚಯ, ವರ ಯಾರು ನೋಡಿ
Follow us On
Google News |
Advertisement