ಮಹಾರಾಷ್ಟ್ರ ಪುಣೆ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ! ತಪ್ಪಿದ ಭಾರೀ ಅನಾಹುತ

Story Highlights

ಮಹಾರಾಷ್ಟ್ರದ ಪುಣೆಯ ಮಂಡೈ ಮೆಟ್ರೋ ನಿಲ್ದಾಣದ ನೆಲ ಮಹಡಿಯಲ್ಲಿ ನೊರೆ ವಸ್ತುವಿಗೆ ಬೆಂಕಿ ಕಾಣಿಸಿಕೊಂಡಿದೆ

ಪುಣೆ (Pune): ಮಹಾರಾಷ್ಟ್ರದ ಪುಣೆಯ ಮೆಟ್ರೋ ನಿಲ್ದಾಣದಲ್ಲಿ (Metro Station) ಭಾರೀ ಅನಾಹುತ ತಪ್ಪಿದೆ. ಭಾನುವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮಂಡೈ ಮೆಟ್ರೋ ನಿಲ್ದಾಣದ ನೆಲ ಮಹಡಿಯಲ್ಲಿ ನೊರೆ ವಸ್ತುವಿಗೆ ಬೆಂಕಿ ಕಾಣಿಸಿಕೊಂಡಿದೆ.

ಆ ಪ್ರದೇಶದಲ್ಲಿ ಹೊಗೆ ಆವರಿಸಿತ್ತು. ಇದನ್ನು ಗಮನಿಸಿದ ಮೆಟ್ರೋ ಅಧಿಕಾರಿಗಳು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಸಿಬ್ಬಂದಿ ಐದು ಅಗ್ನಿಶಾಮಕ ವಾಹನಗಳೊಂದಿಗೆ ಅಲ್ಲಿಗೆ ಬಂದು ಐದು ನಿಮಿಷಗಳಲ್ಲಿ ಬೆಂಕಿಯನ್ನು ಹತೋಟಿಗೆ ತಂದರು. ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ-ಪಾಸ್ತಿ ನಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೋ ನಿಲ್ದಾಣದಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಏತನ್ಮಧ್ಯೆ, ಕೇಂದ್ರ ಸಚಿವ ಮುರಳೀಧರ್ ಮೊಹೋಲ್ ಅವರು ಮೆಟ್ರೋ ನಿಲ್ದಾಣದಲ್ಲಿ ಪರಿಸ್ಥಿತಿ ಸುಧಾರಿಸಿದ್ದು, ಮೆಟ್ರೋ ಸಂಚಾರ ಎಂದಿನಂತೆ ಮುಂದುವರಿಯಲಿದೆ ಎಂದು ಟ್ವೀಟ್ ಮಾಡಿದ್ದಾರೆ.

Fire Breaks Out At Pune Mandai Metro Station

Related Stories