ಎಲೆಕ್ಟ್ರಾನಿಕ್ಸ್ ತಯಾರಿಕಾ ಕಂಪನಿಯ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ನಿಮ್ರಾನಾದಲ್ಲಿ ಸೋಮವಾರ ಮಧ್ಯರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಜೈಪುರ: ರಾಜಸ್ಥಾನದ ಅಲ್ವಾರ್ ಜಿಲ್ಲೆಯ ನಿಮ್ರಾನಾದಲ್ಲಿ ಸೋಮವಾರ ಮಧ್ಯರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗ್ರಾಹಕ ಎಲೆಕ್ಟ್ರಾನಿಕ್ಸ್ ತಯಾರಿಕಾ ಕಂಪನಿಯ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ 12 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ, ಅಪಘಾತಕ್ಕೆ ಕಾರಣಗಳು ತಿಳಿದುಬಂದಿಲ್ಲ. ಅವಘಡದಿಂದ ಅಪಾರ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow Us on : Google News | Facebook | Twitter | YouTube