ಕೋಲ್ಕತ್ತಾದ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ

ಕೋಲ್ಕತ್ತಾದ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಭಯಭೀತರಾಗಿದ್ದರು.

  • ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿ ಬೆಂಕಿ ಅವಘಡ
  • 6 ಅಗ್ನಿಶಾಮಕ ವಾಹನಗಳು ಕಾರ್ಯನಿರ್ವಹಣೆ
  • ಸ್ಥಳೀಯರಲ್ಲಿ ಆತಂಕ, ಪೊಲೀಸರು ಸ್ಥಳಕ್ಕೆ

Fire accident : ಕೋಲ್ಕತ್ತಾದ (Kolkata) ಬಹುಮಹಡಿ ಕಟ್ಟಡದಲ್ಲಿ ದೊಡ್ಡ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಭಯಭೀತರಾಗಿದ್ದರು.

ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಕೋಲ್ಕತಾದ (Kolkata) ಸಾಲ್ಟ್ ಲೇಕ್ ಸೆಕ್ಟರ್ 5 ರಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದ ಸ್ಥಳೀಯರಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಈ ಬಹುಮಹಡಿ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡ (fire accident) ತೀವ್ರವಾಗಿದ್ದು, ಕೆಲವೇ ಕ್ಷಣಗಳಲ್ಲಿ ಭಾರೀ ಹೊಗೆ ಹಾಗೂ ಜ್ವಾಲೆ ಆವರಿಸಿತು.

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಸಾಲ್ಟ್ ಲೇಕ್ ಸೆಕ್ಟರ್ 5 ರಲ್ಲಿ ಈ ಅವಘಡ ಸಂಭವಿಸಿದೆ. ಒಟ್ಟು 6 ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಯ ಕುರಿತು ಹೆಚ್ಚಿನ ವಿವರಗಳು ಇನ್ನೂ ತಿಳಿದುಬಂದಿಲ್ಲ.

ಈ ಅಪಘಾತದ ಬಗ್ಗೆ ಇನ್ನೂ ಸಂಪೂರ್ಣ ಮಾಹಿತಿ ಲಭ್ಯವಾಗಿಲ್ಲ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ ಎನ್ನಲಾಗಿದೆ. ಪೊಲೀಸರ ಸಹಕಾರದೊಂದಿಗೆ ಅಗ್ನಿಶಾಮಕ ಸಿಬ್ಬಂದಿ ಇನ್ನೂ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಈ ವೇಳೆ ಕೆಲವರನ್ನು ಸುರಕ್ಷಿತವಾಗಿ ಹೊರತರಲಾಗಿದೆ ಎಂದು ಹೇಳಲಾಗಿದೆ.

Fire Breaks Out in Kolkata High-Rise

English Summary▼

TRENDING ARTICLES1 / 4
Show More

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories