ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ, ದೆಹಲಿಯ ಸುಲ್ತಾನ್‌ಪುರಿ ಕೊಳೆಗೇರಿಯಲ್ಲಿ ಭಾರೀ ಬೆಂಕಿ
Delhi Fire Accident: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಶುಕ್ರವಾರ ಮುಂಜಾನೆ ದೆಹಲಿಯ ಸುಲ್ತಾನ್‌ಪುರಿ ಕೊಳೆಗೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ (Delhi Fire Accident) ಸಂಭವಿಸಿದೆ. ಶುಕ್ರವಾರ ಮುಂಜಾನೆ ದೆಹಲಿಯ ಸುಲ್ತಾನ್‌ಪುರಿ ಕೊಳೆಗೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕ್ರಮೇಣ ಪ್ರದೇಶದಾದ್ಯಂತ ಹರಡುತ್ತಿದ್ದು, ದೊಡ್ಡ ಬೆಂಕಿ ಕಾಣಿಸಿಕೊಂಡಿತು. ಇದರಿಂದಾಗಿ ಆ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು.
15 ಅಗ್ನಿಶಾಮಕ ವಾಹನಗಳೊಂದಿಗೆ ಬೆಂಕಿಯನ್ನು ನಿಯಂತ್ರಿಸಲಾಯಿತು. ಈ ಅವಘಡದಲ್ಲಿ ಇಲ್ಲಿಯವರೆಗೆ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ವಿಭಾಗೀಯ ಅಗ್ನಿಶಾಮಕ ಅಧಿಕಾರಿ ಎ.ಕೆ.ಜೈಸ್ವಾಲ್ ತಿಳಿಸಿದ್ದಾರೆ. 15 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿಯನ್ನು ನಂದಿಸಲಾಯಿತು. ಇದುವರೆಗೆ ಯಾರಿಗೂ ಗಾಯಗಳಾಗಿಲ್ಲ ಎಂದು ಹೇಳಿದರು.
ಈ ಕಾರ್ಯಾಚರಣೆಯಲ್ಲಿ ರೋಬೋಟ್‌ಗಳನ್ನು ಸಹ ಬಳಸಲಾಯಿತು ಮತ್ತು ಅವು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದವು ಎಂದು ತಿಳಿಸಿದ್ದಾರೆ.
Fire Breaks Out In Slums Near Delhi Sultanpuri Road
Delhi | Fire breaks out in slums near Sultanpuri Road. More details are awaited. pic.twitter.com/2XMfCLQQ1t
— ANI (@ANI) March 2, 2023
Delhi | Fire breaks out in slums near Sultanpuri Road. More details are awaited. pic.twitter.com/2XMfCLQQ1t
— ANI (@ANI) March 2, 2023
Follow us On
Google News |