ಶಂಶಾಬಾದ್ ವಿಮಾನ ನಿಲ್ದಾಣದ ಬಳಿ ಭಾರೀ ಅಗ್ನಿ ಅವಘಡ
ಸೋಮವಾರ ಸಂಜೆ ಶಂಶಾಬಾದ್ ವಿಮಾನ ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ ಸಂಭವಿಸಿದೆ, ಭಾರೀ ಬೆಂಕಿ ಕಾಣಿಸಿಕೊಂಡಿದೆ.
- ಶಂಶಾಬಾದ್ ವಿಮಾನ ನಿಲ್ದಾಣದ ಬಳಿ ಅಗ್ನಿ ಅವಘಡ
- ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಿಯಂತ್ರಣ
- ಬ್ಯಾಟರಿ ಕಂಪನಿಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ
ಹೈದರಾಬಾದ್: ಶಂಶಾಬಾದ್ ವಿಮಾನ ನಿಲ್ದಾಣದ (Shamshabad Airport) ಬಳಿ ಸೋಮವಾರ ಸಂಜೆ ಭಾರೀ ಅಗ್ನಿ ಅವಘಡ (Fire Breaks Out) ಸಂಭವಿಸಿದೆ. ವಿಮಾನ ನಿಲ್ದಾಣದ ಬಳಿ ಇರುವ ಬ್ಯಾಟರಿ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಮತ್ತು ಪೊಲೀಸರು ಖಚಿತಪಡಿಸಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಿದರು.
ನಿರ್ಮಾಣ ಹಂತದಲ್ಲಿರುವ ಬ್ಯಾಟರಿ ಕಂಪನಿಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಮಿಕರು ಆಚೆ ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ಆದರೆ ಬೆಂಕಿ ಅನಾಹುತಕ್ಕೆ ಕಾರಣಗಳು ಇನ್ನೂ ತಿಳಿದು ಬಂದಿಲ್ಲ. ವೆಲ್ಡಿಂಗ್ ಕೆಲಸದಿಂದ ಬೆಂಕಿ ಹೊತ್ತಿಕೊಂಡಿದೆಯೇ? ಅಥವಾ ಬೇರೆ ಕಾರಣಗಳಿವೆಯೇ..? ಆ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾವುದೇ ಪ್ರಾಣ ಹಾನಿಯಾಗದ ಕಾರಣ ಪೊಲೀಸರು ಹಾಗೂ ಕಂಪನಿ ಮಾಲೀಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
Fire Breaks Out Near Hyderabad Shamshabad Airport