ಫಾರ್ಮಾ ಕಂಪನಿಯಲ್ಲಿ ಭೀಕರ ಸ್ಫೋಟ: ಐವರು ಸಾವು, ಹತ್ತು ಮಂದಿಗೆ ಗಾಯ

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಶ್ರೀ ಸಿಟಿಯಲ್ಲಿರುವ ಟಿಲ್‌ ಹೆಲ್ತ್‌ಕೇರ್‌ ಕಂಪನಿಯಲ್ಲಿ ಬಾಯ್ಲರ್‌ ಸ್ಫೋಟಗೊಂಡು ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಐವರು ಕಾರ್ಮಿಕರು ಮೃತಪಟ್ಟಿದ್ದಾರೆ, ಹತ್ತು ಮಂದಿ ಗಾಯಗೊಂಡಿದ್ದಾರೆ.

ಆಂಧ್ರಪ್ರದೇಶ: ಶ್ರೀ ಸಿಟಿಯಲ್ಲಿರುವ ಟಿಲ್‌ ಹೆಲ್ತ್‌ಕೇರ್‌ (Til Healthcare) ಕಂಪನಿಯಲ್ಲಿ ಶನಿವಾರ ಸಂಭವಿಸಿದ ಬಾಯ್ಲರ್‌ ಸ್ಫೋಟ ಭಾರಿ ಆತಂಕಕ್ಕೆ ಕಾರಣವಾಗಿದೆ. ಟ್ಯಾಬ್ಲೆಟ್‌ಗಳ ತಯಾರಿಕಾ ಘಟಕದಲ್ಲಿ ನೈಟ್‌ ಶಿಫ್ಟ್‌ ವೇಳೆ ಈ ದುರ್ಘಟನೆ ನಡೆದಿದೆ.

ಸ್ಫೋಟದ ತೀವ್ರತೆಗೆ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೂ ಮೂವರು ಕಾರ್ಮಿಕರನ್ನು ತಡದ ಸರ್ಕಾರಿ ಆಸ್ಪತ್ರೆಗೆ (Tada Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರೂ ಮೃತಪಟ್ಟಿದ್ದಾರೆ.

ಮೃತರನ್ನು ಆಂಧ್ರಪ್ರದೇಶದ ವಾಸು (38), ಚಿನ್ನ ಮಸ್ತಾನ್‌ (45), ತಮಿಳುನಾಡಿನ ಮೋಹನ್‌ (20), ರಮೇಶ್‌ (45) ಹಾಗೂ ಪಶ್ಚಿಮ ಬಂಗಾಳದ ಗೌರಬ್‌ ರಾಯ್‌ (36) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಮತ್ತೂ ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಸ್ಫೋಟದ ಬಳಿಕ ಕಾರ್ಖಾನೆ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಘಟನೆ ಬಗ್ಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Andhra Pradesh CM) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹50 ಲಕ್ಷ ಎಕ್ಸ್‌ಗ್ರೇಷಿಯಾ (Ex-gratia) ನೀಡುವುದಾಗಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ಅಗತ್ಯವಿರುವ ಉತ್ತಮ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

English Summary▼

ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories