Food Poisoning: ಮಧ್ಯಾಹ್ನದ ಊಟ ತಿಂದ 22 ಮಕ್ಕಳು ಅಸ್ವಸ್ಥ, ವಾಂತಿ, ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು

Food Poisoning : ರಾಜಸ್ಥಾನದ ದೌಸಾ ಜಿಲ್ಲೆಯ ನಂಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಊಟದ ಯೋಜನೆಯಡಿ ನೀಡಿದ ಊಟ ತಿಂದ 22 ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

Online News Today Team

ಜೈಪುರ : ರಾಜಸ್ಥಾನದ ದೌಸಾ ಜಿಲ್ಲೆಯ ನಂಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಊಟದ ಯೋಜನೆಯಡಿ ನೀಡಿದ ಊಟ ತಿಂದ 22 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ವಾಂತಿ, ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.

ನಂಗಲ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಡಾ.ರಾಮ್‌ಜಿ ಲಾಲ್ ಮೀನಾ ಮಾತನಾಡಿ, ಶಾಲೆಯ 70 ಮಕ್ಕಳು ಮಧ್ಯಾಹ್ನದ ಊಟದ ಯೋಜನೆಯಡಿ ನೀಡಲಾದ ಆಹಾರ ಸೇವಿಸಿದ್ದಾರೆ.

Food Poisoning: ಮಧ್ಯಾಹ್ನದ ಊಟ ತಿಂದ 22 ಮಕ್ಕಳು ಅಸ್ವಸ್ಥ, ವಾಂತಿ, ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು

ಊಟ ತಿಂದ 22 ಮಕ್ಕಳಿಗೆ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದರು. ಚಿಕಿತ್ಸೆ ಬಳಿಕ ಎಲ್ಲ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ ಎಂದು ಡಾ.ಮೀನಾ ತಿಳಿಸಿದ್ದಾರೆ. ಶಾಲೆಯ ನೀರು ಮತ್ತು ಆಹಾರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದರು.

Follow Us on : Google News | Facebook | Twitter | YouTube