ಸ್ನೇಹಿತ ಶಿಂಜೋ ಅಬೆ ಹತ್ಯೆಯಿಂದ ದುಃಖಿತನಾಗಿದ್ದೇನೆ – ಮನಮೋಹನ್ ಸಿಂಗ್

ನವದೆಹಲಿ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನಕ್ಕೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಂತಾಪ ಸೂಚಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಮನಮೋಹನ್ ಸಿಂಗ್ ಅವರು ಭಾರತದಲ್ಲಿನ ಜಪಾನ್ ರಾಯಭಾರಿ ಸತೋಶಿ ಸುಜುಕಿ ಅವರಿಗೆ ಪತ್ರ ಬರೆದಿದ್ದಾರೆ.
ಆ ಪತ್ರದಲ್ಲಿ ಅವರು ಹೀಗೆ ಹೇಳಿದ್ದಾರೆ: “ಜಪಾನ್‌ನ ಮಾಜಿ ಪ್ರಧಾನಿ ಹತ್ಯೆಯಾಗಿರುವುದು ತುಂಬಾ ನೋವಿನ ಸಂಗತಿಯಾಗಿದೆ, ಅವರು ನನಗೆ ಉತ್ತಮ ಸ್ನೇಹಿತ, ನನ್ನ ಅವಧಿಯಲ್ಲಿ ನಾವಿಬ್ಬರೂ ಭಾರತ-ಜಪಾನ್ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಎರಡೂ ದೇಶಗಳು ನಮ್ಮ ಪ್ರಯತ್ನಗಳಿಂದಾಗಿ ಉತ್ತಮ ಪ್ರಗತಿಯನ್ನು ಸಾಧಿಸಿದೆ. ದಯವಿಟ್ಟು ಅಬೆ ಕುಟುಂಬಕ್ಕೆ ನನ್ನ ಆಳವಾದ ಸಂತಾಪವನ್ನು ತಿಳಿಸಿ.”
67 ವರ್ಷದ ಅಬೆ ಅವರು ಜಪಾನ್‌ನ ಸುದೀರ್ಘ ಅವಧಿಯ ಪ್ರಧಾನಿಯಾಗಿದ್ದಾರೆ. ಅವರು ಆರೋಗ್ಯ ಕಾರಣಗಳಿಗಾಗಿ 2020 ರಲ್ಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದರು.
ಗುಂಡಿನ ದಾಳಿ ನಡೆಸಿದವರನ್ನು ಸ್ಥಳದಲ್ಲೇ ಪೊಲೀಸರು ಬಂಧಿಸಿದ್ದಾರೆ. ಸುರಕ್ಷಿತ ರಾಷ್ಟ್ರಗಳಲ್ಲೊಂದೆಂದು ಪರಿಗಣಿಸಲ್ಪಟ್ಟಿರುವ ಜಪಾನ್ ನಲ್ಲಿ ನಡೆದಿರುವ ಘಟನೆ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ.
former Prime Minister Manmohan Singh has expressed his condolences to death of Shinzo Abe
ನಾಳೆಯ ದಿನ ಭವಿಷ್ಯ: 12-11-2026, ಗುರುವಾರ
Read the story
ಹಾಸನಾಂಬೆ ಜಾತ್ರೆಗೆ ತೆರೆ; ಮತ್ತೆ ದೇವಿ ದರ್ಶನಕ್ಕೆ ಒಂದು ವರ್ಷ ಕಾಯಬೇಕು
Read the story
ನಮಗೂ 3,600 ದರ ನೀಡಿ; ಹಾವೇರಿ ಕಬ್ಬು ಬೆಳೆಗಾರರ ಪಟ್ಟು
Read the story
ತಾತನ ಆಸ್ತಿಯಲ್ಲಿ ಮೊಮ್ಮಗನಿಗೆ ಹಕ್ಕಿಲ್ಲ! ಹೈಕೋರ್ಟ್ ಮಹತ್ವದ ತೀರ್ಪು
Read the story
ಗುಡ್ ನ್ಯೂಸ್; ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
Read the story



