ಟ್ರಕ್ ಮೂಲಕ ಕಾಶ್ಮೀರಕ್ಕೆ ನುಸುಳಲು ಯತ್ನ, ನಾಲ್ವರು ಉಗ್ರರ ಹತ್ಯೆ
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ವರು ಶಂಕಿತ ಜೈಶ್-ಎ-ಮೊಹಮ್ಮದ್ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಟ್ರಕ್ ಮೂಲಕ ಕಾಶ್ಮೀರಕ್ಕೆ ನುಸುಳಲು ಯತ್ನ, ನಾಲ್ವರು ಉಗ್ರರ ಹತ್ಯೆ
( Kannada News Today ) : ಜಮ್ಮು / ಶ್ರೀನಗರ : ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ವರು ಶಂಕಿತ ಜೈಶ್-ಎ-ಮೊಹಮ್ಮದ್ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
ಜಮ್ಮು ನಗರದ ನಾಗ್ರೋಟಾ ಪ್ರದೇಶದ ಬಾನ್ ಟೋಲ್ ಪ್ಲಾಜಾದಲ್ಲಿ ಗುರುವಾರ ಮುಂಜಾನೆ 5 ಗಂಟೆ ಸುಮಾರಿಗೆ ಸೈನಿಕರು ವಾಹನಗಳನ್ನು ಪರಿಶೀಲಿಸುತ್ತಿದ್ದಾಗ ಈ ಘಟನೆ ನಡೆದಿದೆ.
ದಾರಿಯಲ್ಲಿ ಟ್ರಕ್ನಲ್ಲಿ ಕಾಶ್ಮೀರಕ್ಕೆ ನುಸುಳುತ್ತಿದ್ದ ಉಗ್ರರ ಗುಂಪನ್ನು ಸೈನಿಕರು ತಡೆಡಿದ್ದಾರೆ. ಈ ವೇಳೆ ಟ್ರಕ್ ಚಾಲಕ ವಾಹನದಿಂದ ಇಳಿದು ಪರಾರಿಯಾಗಿದ್ದಾನೆ.
ನಂತರ ಸೈನಿಕರು ಟ್ರಕ್ ಅನ್ನು ಪರೀಕ್ಷಿಸಲು ಪ್ರಯತ್ನಿಸಿದರು, ಆವೇಳೆ ಟ್ರಕ್ನಲ್ಲಿ ಅಡಗಿದ್ದ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ.
ಭಾರತೀಯ ಸೈನಿಕರು ಕೂಡ ಗುಂಡು ಹಾರಿಸಿದ್ದಾರೆ. 4 ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಇಬ್ಬರು ಪೊಲೀಸರು ಸಹ ಗಾಯಗೊಂಡಿದ್ದಾರೆ.
ಅವರ ಜೀವಕ್ಕೆ ಅಪಾಯವಿಲ್ಲ ಎಂದು ಜಮ್ಮು ಐಜಿ ಮುಖೇಶ್ ಸಿಂಗ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಘಟನಾ ಸ್ಥಳದಿಂದ ದೊಡ್ಡ ಪ್ರಮಾಣದ ಮದ್ದುಗುಂಡು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ಆಧಾರದ ಮೇಲೆ, ಬಂದೂಕುಧಾರಿಗಳು ಜೈಶೆ ಸಂಘಟನೆಗೆ ಸೇರಿದವರಾಗಿದ್ದಾರೆ ಎನ್ನಲಾಗಿದೆ.
ಡಿಸೆಂಬರ್ 28 ರಿಂದ ಡಿಸೆಂಬರ್ 22 ರವರೆಗೆ ಜಮ್ಮು ಮತ್ತು ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿಗಳ (ಡಿಡಿಸಿ) ಚುನಾವಣಾ ಪ್ರಕ್ರಿಯೆಯನ್ನು ಅಡ್ಡಿಪಡಿಸಲು ಮತ್ತು ಭಾರಿ ಚುನಾವಣಾ ಹಿಂಸಾಚಾರ ನಡೆಸಲು ಭಯೋತ್ಪಾದಕರು ಸಂಚು ಹೂಡಿದ್ದಾರೆ ಎಂದು ಶಂಕಿಸಲಾಗಿದೆ.
ಕಾಶ್ಮೀರ ಕಣಿವೆಗೆ ಹೋಗುವಾಗ ಉಗ್ರರನ್ನು ಕೊಲ್ಲಲಾಯಿತು ಎಂದು ಕಾಶ್ಮೀರ ಐಜಿ ವಿಜಯ್ ಕುಮಾರ್ ಹೇಳಿದ್ದಾರೆ.
ಏತನ್ಮಧ್ಯೆ, ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಸಮೀಪವಿರುವ ಹಳ್ಳಿಗಳ ಮೇಲೆ ಪಾಕಿಸ್ತಾನನಡೆಸಿದ ಬುಧವಾರ ಮಧ್ಯರಾತ್ರಿ ಗುಂಡಿನದಾಳಿ ನಡೆಸಿದ್ದಾರೆ. ಗುಂಡಿನ ದಾಳಿಗೆ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಮೇಲೆ ಗುಂಡು ಹಾರಿಸಿ ನಮ್ಮ ಪಡೆಗಳು ಸಹ ಪ್ರತೀಕಾರ ತೀರಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.