ಗ್ಯಾಸ್ ಟ್ಯಾಂಕರ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ, ನಾಲ್ವರು ಸಜೀವ ದಹನ
ರಾಜಸ್ಥಾನದ ಅಜ್ಮೀರ್‌ನಲ್ಲಿ ಗ್ಯಾಸ್ ಟ್ಯಾಂಕರ್ ಟ್ರಕ್ ಡಿಕ್ಕಿಯಾಗಿ ನಾಲ್ವರು ಸಜೀವ ದಹನ, ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡು ಎರಡು ವಾಹನಗಳು ಬೆಂಕಿಗೆ ಆಹುತಿಯಾದಾಗ ಅದರಲ್ಲಿದ್ದ ನಾಲ್ವರು ಸಜೀವ ದಹನವಾಗಿದ್ದಾರೆ
ರಾಜಸ್ಥಾನದ ಅಜ್ಮೀರ್‌ನಲ್ಲಿ ಗ್ಯಾಸ್ ಟ್ಯಾಂಕರ್ ಟ್ರಕ್ ಡಿಕ್ಕಿಯಾಗಿ ನಾಲ್ವರು ಸಜೀವ ದಹನ, ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡು ಎರಡು ವಾಹನಗಳು ಬೆಂಕಿಗೆ ಆಹುತಿಯಾದಾಗ ಅದರಲ್ಲಿದ್ದ ನಾಲ್ವರು ಸಜೀವ ದಹನವಾಗಿದ್ದಾರೆ.
ಅತಿ ವೇಗದಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡು ಎರಡು ವಾಹನಗಳು ಬೆಂಕಿಗೆ ಆಹುತಿಯಾದಾಗ ಅದರಲ್ಲಿದ್ದ ನಾಲ್ವರು ಸಜೀವ ದಹನ ವಾಗಿದ್ದಾರೆ. ರಾಜಸ್ಥಾನ ರಾಜ್ಯದ ಅಜ್ಮೀರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಎರಡು ಭಾರಿ ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದಾಗ ಟ್ಯಾಂಕರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಸೆಕೆಂಡ್‌ಗಳಲ್ಲಿ ಇದೆಲ್ಲ ಸಂಭವಿಸಿದ್ದು, ಎರಡು ವಾಹನಗಳಲ್ಲಿದ್ದ ನಾಲ್ವರು ತಪ್ಪಿಸಿಕೊಳ್ಳಲು ಅವಕಾಶವಿಲ್ಲದೇ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ಯಾಂಕರ್‌ನಲ್ಲಿ ಪೆಟ್ರೋಲಿಯಂ ಗ್ಯಾಸ್ ಸುರಿದಿದ್ದರಿಂದ ರಸ್ತೆಯಲ್ಲಿ ಸಾಗುವ ಇತರೆ ವಾಹನಗಳು ಹಾಗೂ ಅಕ್ಕಪಕ್ಕದ ಮನೆ, ಅಂಗಡಿಗಳಿಗೂ ಬೆಂಕಿ ತಗುಲಿದೆ ಎಂದು ತಿಳಿಸಿದರು.
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿಸಿದರು. ಈ ನಡುವೆ ಘಟನೆ ತಿಳಿದ ತಕ್ಷಣ ಜಿಲ್ಲಾಧಿಕಾರಿ ಅಂಶುದೀಪ್ ಹಾಗೂ ಎಸ್ಪಿ ಚುನಾರಾಮ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು.
Four People Burn Alive In Tanker Truck Collision In Ajmer Rajasthan
Follow us On
Google News |