ಕಾರೊಂದು ಪಿಲ್ಲರ್‌ಗೆ ಡಿಕ್ಕಿ ಹೊಡೆದು ಪಲ್ಟಿ, ಐವರು ಸಾವು

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಹೆದ್ದಾರಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. 

ಪ್ರಯಾಗರಾಜ್: ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಹೆದ್ದಾರಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇತರ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 5:45ಕ್ಕೆ ಅಪಘಾತ ಸಂಭವಿಸಿದೆ. ಮಗುವಿನ ಕೂದಲು ತೆಗೆಸಲು ಕುಟುಂಬಸ್ಥರು ವಿದ್ಯಾಂಚಲ್‌ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತರನ್ನು ರೇಖಾದೇವಿ (45), ಕೃಷ್ಣಾದೇವಿ (70), ಸವಿತಾ (36), ರೇಖಾ (32) ಮತ್ತು ಓಜಸ್ (ಒಂದೂವರೆ ವರ್ಷದ ಮಗು) ಎಂದು ಪೊಲೀಸರು ಗುರುತಿಸಿದ್ದಾರೆ.

Four Women And A Child Killed 5 Injured In Road Accident In Up Prayagraj