ಚಿನ್ನದ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, 8 ಮಂದಿ ಸಾವು

ಚಿನ್ನದ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಎಂಟು ಜನರು ಸಾವನ್ನಪ್ಪಿದ್ದಾರೆ. ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

  • ಮಾರುಕಟ್ಟೆ ಪ್ರದೇಶದ ಚಿನ್ನದ ಅಂಗಡಿಯಲ್ಲಿ ಸ್ಫೋಟ
  • ಗ್ಯಾಸ್ ಸ್ಟವ್‌ನಲ್ಲಿ ಹಳೆಯ ಚಿನ್ನ ಕರಗಿಸುತ್ತಿದ್ದ ವೇಳೆ ದುರಂತ
  • ಘಟನೆ ಸಂಬಂಧ ತನಿಖೆ ಆರಂಭಿಸಿದ ಪೊಲೀಸರು

ಚಿನ್ನದ ಅಂಗಡಿಯಲ್ಲಿ (jewellery Shop) ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Gas Cylinder Blast) ಎಂಟು ಜನರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಘಟನೆಯಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ರಾಜಸ್ಥಾನ ರಾಜ್ಯದ ಬಿಕಾನೇರ್ ಜಿಲ್ಲೆಯ (Bikaner district) ಮದನ್ ಮಾರುಕಟ್ಟೆ ಪ್ರದೇಶದಲ್ಲಿ (Madan market area) ಈ ಅವಘಡ ಸಂಭವಿಸಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಿಲಿಂಡರ್ ಸ್ಫೋಟದ ಬಲದಿಂದ ಅಂಗಡಿ ಇದ್ದ ಕಟ್ಟಡವು ಸಂಪೂರ್ಣ ನಾಶವಾಗಿದೆ. ಚಿನ್ನದ ಅಂಗಡಿಯಲ್ಲಿ ಗ್ಯಾಸ್ ಸ್ಟೌವ್ ಮೇಲೆ ಹಳೆಯ ಚಿನ್ನ ಮತ್ತು ಬೆಳ್ಳಿಯನ್ನು ಕರಗಿಸುವಾಗ ಸಿಲಿಂಡರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಬಗ್ಗೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಹೋಗಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ದುರಂತದ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಸ್ಫೋಟದ ನಿಖರ ಕಾರಣ ಏನೆಂಬುದರ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಅಧಿಕಾರಿಗಳು ಮುಂದಿನ ಹಂತದಲ್ಲಿ ಎಲ್ಲಾ ಅಂಗಡಿಗಳ ಸುರಕ್ಷತಾ ಪರಿಶೀಲನೆ ಮಾಡುವ ಸಾಧ್ಯತೆ ಇದೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಮಾರುಕಟ್ಟೆಯಲ್ಲಿರುವ ಚಿನ್ನದ ಅಂಗಡಿಯಲ್ಲಿ ಗ್ಯಾಸ್ ಸ್ಟವ್‌ (Gas stove) ಮೇಲೆ ಹಳೆಯ ಚಿನ್ನ ಮತ್ತು ಬೆಳ್ಳಿಯನ್ನು ಕರಗಿಸುತ್ತಿದ್ದಾಗ ಸಿಲಿಂಡರ್‌ (Gas cylinder) ಸ್ಪೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಅಂಗಡಿಯು ಸಂಪೂರ್ಣವಾಗಿ ಧ್ವಂಸವಾಗಿದೆ ಮತ್ತು ಅವಶೇಷಗಳಡಿ ಹಲವರು ಸಿಲುಕಿದ್ದರು.

Gas Cylinder Blast in Rajasthan Gold Shop Kills 8

English Summary▼

Satish Raj Goravigere

12 ವರ್ಷಗಳ ಪತ್ರಿಕಾ ಅನುಭವ ಹೊಂದಿರುವ ಸತೀಶ್ ರಾಜ್ ಗೊರವಿಗೆರೆ ರವರು, 2019ರಲ್ಲಿ ಕನ್ನಡ ನ್ಯೂಸ್ ಟುಡೇ ಸ್ಥಾಪಿಸಿದವರು. ಬೆಂಗಳೂರು, ಕರ್ನಾಟಕ ಹಾಗೂ ರಾಷ್ಟ್ರೀಯ… More »

Related Stories