ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರಿಗೆ ಜೀವ ಬೆದರಿಕೆ, ನಿವಾಸಕ್ಕೆ ಬಿಗಿ ಭದ್ರತೆ

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಐಸಿಸ್ ಕಾಶ್ಮೀರದಿಂದ ಬೆದರಿಕೆ ಹಾಕಲಾಗಿದೆ (death threats from 'ISIS Kashmir') ಎಂದು ಈಗಾಗಲೇ ಅವರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.

🌐 Kannada News :

ನವದೆಹಲಿ (New Delhi) : ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ (Gautam Gambhir) ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಐಸಿಸ್ ಕಾಶ್ಮೀರದಿಂದ ಬೆದರಿಕೆ ಹಾಕಲಾಗಿದೆ (death threats from ‘ISIS Kashmir’) ಎಂದು ಈಗಾಗಲೇ ಅವರು ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಜಿ ಕ್ರಿಕೆಟಿಗನ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅವರ ಕುಟುಂಬಕ್ಕೆ ರಕ್ಷಣೆ ನೀಡಲಾಗಿದ್ದು, ಮನೆಗೆ ಭದ್ರತೆ ನೀಡಲಾಗಿದೆ ಎಂದು ಕೇಂದ್ರೀಯ ಡಿಸಿಪಿ ಶ್ವೇತಾ ಚೌಹಾಣ್ ಹೇಳಿದ್ದಾರೆ.

ಐಸಿಸ್ ಕಾಶ್ಮೀರ ಎಂಬ ಹೆಸರಿನಲ್ಲಿ ಫೋನ್ ಮತ್ತು ಇ-ಮೇಲ್ ಮೂಲಕ (Email from ISIS-Kashmir) ಐಸಿಸ್ ತನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದೆ ಎಂದು ಗೌತಮ್ ಗಂಭೀರ್ ದೂರು ದಾಖಲಿಸಿದ್ದರು. ಪೊಲೀಸರು ಹೆಚ್ಚಿನ ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.

“ನವೆಂಬರ್ 23 ರಂದು ರಾತ್ರಿ 9.32 ಕ್ಕೆ ಸಂಸದ ಗೌತಮ್ ಗಂಭೀರ್ ಅವರ ಅಧಿಕೃತ ಐಡಿಗೆ ಐಸಿಸ್-ಕಾಶ್ಮೀರದಿಂದ ಇಮೇಲ್ ಬಂದಿದೆ” ಎಂದು ಅವರು ಸಲ್ಲಿಸಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರನ್ನು ಸ್ವೀಕರಿಸಿದ ನಂತರ, ಸೆಂಟ್ರಲ್ ಡಿಸ್ಟ್ರಿಕ್ಟ್ ಪೊಲೀಸರ ಸೈಬರ್ ಸೆಲ್ ತಮ್ಮ ತನಿಖೆಯನ್ನು ಪ್ರಾರಂಭಿಸಿದ್ದಾರೆ ಮತ್ತು ಇಮೇಲ್‌ನ ಮೂಲವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೂರ್ವ ದೆಹಲಿ ಕ್ಷೇತ್ರದಿಂದ ಗೌತಮ್ ಗಂಭೀರ್ ಬಿಜೆಪಿಯಿಂದ ಗೆದ್ದು ಸಂಸದರಾಗಿದ್ದಾರೆ.. ಭಾರತೀಯ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ಆಗಿದ್ದ ಅವರು ಈಗ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

Gautam Gambhir receives death threat from ISIS Kashmir

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today