Video: ಯುವತಿಯ ಸ್ಕೂಟಿಗೆ ಲಾರಿ ಡಿಕ್ಕಿ; ಬಂಪರ್ ಹಿಡಿದು ಪ್ರಾಣ ಉಳಿಸಿಕೊಂಡ ಗಟ್ಟಿಗಿತ್ತಿ
ಮಹಾರಾಷ್ಟ್ರದ ಅಹಿಲ್ಯಾನಗರದಲ್ಲಿ ವೇಗವಾಗಿ ಬಂದ ಮರಳು ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಯುವತಿ ಬಂಪರ್ ಹಿಡಿದು ಅಪಾಯದಿಂದ ಪಾರಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ.

Viral Video: ಮಹಾರಾಷ್ಟ್ರದ ಅಹಿಲ್ಯಾನಗರ ಜಿಲ್ಲೆಯ ಶ್ರೀರಾಮಪುರದಲ್ಲಿ ಅಕ್ಟೋಬರ್ 8ರಂದು ನಡೆದ ರಸ್ತೆ ಅಪಘಾತವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ವ್ಯಾಪಕವಾಗಿ ಹರಿದಾಡುತ್ತಿದೆ. ವೇಗವಾಗಿ ಬಂದ ಮರಳು ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದರೂ, ಯುವತಿ ತಕ್ಷಣ ಪ್ರತಿಕ್ರಿಯಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಮುಖ್ಯ ರಸ್ತೆಯ ತಿರುವಿನಲ್ಲಿ ಲಾರಿ ಚಾಲಕ ಏಕಾಏಕಿ ಬಲಕ್ಕೆ ತಿರುಗಿಸಲು ಪ್ರಯತ್ನಿಸಿದ್ದಾನೆ. ಈ ವೇಳೆ ಯುವತಿ ಚಲಾಯಿಸುತ್ತಿದ್ದ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಯುವತಿ ವಾಹನದಡಿ ಬೀಳುವ ಅಪಾಯ ಎದುರಾಗಿತ್ತು. ಆದರೆ, ಸಮಯಪ್ರಜ್ಞೆ ಮೆರೆದ ಆಕೆ ಲಾರಿಯ ಮುಂಭಾಗದ ಬಂಪರ್ ಅನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾಳೆ.
ಇದನ್ನೂ ಓದಿ: ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಮೇಲೆ ದಾಳಿ! ತನಿಖೆಗೆ ಆದೇಶಿಸಿದ ಭಾರತ ಸರ್ಕಾರ
ಲಾರಿ ಚಲಿಸುತ್ತಿದ್ದ ಸಂದರ್ಭದಲ್ಲೇ ಬಂಪರ್ ಹಿಡಿದುಕೊಂಡ ಯುವತಿ, ಬಳಿಕ ನೆಲದ ಮೇಲೆ ಕಾಲೂರಿ ಅಪಾಯದಿಂದ ಪಾರಾಗಿದ್ದಾಳೆ. ನಂತರ ಎದ್ದು ನಡೆದುಕೊಂಡು ದೂರಕ್ಕೆ ತೆರಳಿದ್ದಾಳೆ. ಈ ಭಯಾನಕ ಕ್ಷಣಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Camera) ಸೆರೆಯಾಗಿವೆ.
ಅಪಘಾತದ ಬಳಿಕ ಲಾರಿ ಚಾಲಕ ಕೆಳಗಿಳಿದು ಸ್ಕೂಟಿಯನ್ನು ಪರಿಶೀಲಿಸಿದ್ದಾನೆ. ಯುವತಿಯದ್ದೇ ತಪ್ಪು ಎಂಬಂತೆ ವರ್ತಿಸಲು ಪ್ರಯತ್ನಿಸಿದ್ದಾನೆ ಎಂದು ವರದಿಯಾಗಿದೆ. ಆದರೆ, ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಂತೆ ಚಾಲಕ ಲಾರಿಯನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.
ಇದನ್ನೂ ಓದಿ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರ ಅಜ್ಜಿ ಸಾವಿತ್ರಿಬಾಯಿ ದೀಪ್ಕೆ ನಿಧನ
ಇನ್ನೊಂದೆಡೆ, ಮರಳು ಸಾಗಿಸುತ್ತಿದ್ದ ಲಾರಿಗೆ ನಂಬರ್ ಪ್ಲೇಟ್ ಇಲ್ಲದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಈ ಪ್ರದೇಶದಲ್ಲಿ ಅನುಮತಿ ಇಲ್ಲದೆ ಅತಿವೇಗವಾಗಿ ಮರಳು ಲಾರಿಗಳು ಸಂಚರಿಸುತ್ತಿರುವುದಕ್ಕೆ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಅಪಘಾತದಲ್ಲಿ ಯುವತಿ ಕೂದಲೆಳೆಯ ಅಂತರದಲ್ಲಿ ಪಾರಾಗಿರುವ ದೃಶ್ಯಗಳು ಇದೀಗ ವೈರಲ್ ಆಗಿವೆ.
🚨 GIRL GRABS TRUCK BUMPER AFTER SCOOTER COLLISION IN MAHARASHTRA
CCTV footage from Belapur Road in Shrirampur, Maharashtra shows a sand-laden truck turning into the path of a girl riding a scooter.
The truck hits the scooter and the girl grabs its front bumper to avoid being run over by the heavy vehicle.
The incident took place on October 8.
🎥 CCTV Footage
#Maharashtra
— contentkikamii (@contentkikamii) October 10, 2026
ಕರ್ನಾಟಕ ರಾಜ್ಯದ ಮೂಲೆಮೂಲೆಗಳ ಕನ್ನಡ ಸುದ್ದಿಗಳ ಜೊತೆಗೆ ದಿನದ ಪ್ರಮುಖ ಬೆಳವಣಿಗೆಗಳನ್ನು Kannada News Today ಮೂಲಕ ತಿಳಿಯಿರಿ.



