ಶಸ್ತ್ರಚಿಕಿತ್ಸೆಯ ನಂತರ ಬಾಲಕಿ ಸಾವು, ಅಂಗಾಂಗ ಕಳವು ಆರೋಪ

ಶಸ್ತ್ರಚಿಕಿತ್ಸೆ ಬಳಿಕ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಆದರೆ ಬಾಲಕಿಯ ಕುಟುಂಬದವರು ಆಕೆಯ ದೇಹದ ಭಾಗಗಳನ್ನು ಕದ್ದು ಪ್ಲಾಸ್ಟಿಕ್ ತುಂಬಿದ್ದಾರೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಶಸ್ತ್ರಚಿಕಿತ್ಸೆ ಬಳಿಕ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಆದರೆ ಬಾಲಕಿಯ ಕುಟುಂಬದವರು ಆಕೆಯ ದೇಹದ ಭಾಗಗಳನ್ನು ಕದ್ದು ಪ್ಲಾಸ್ಟಿಕ್ ತುಂಬಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ. 15 ವರ್ಷದ ಬಾಲಕಿ ಕರುಳಿನ ಕಾಯಿಲೆಯಿಂದ ಬಳಲುತ್ತಿದ್ದಳು. ಜನವರಿ 21 ರಂದು ಆಸ್ಪತ್ರೆಗೆ ದಾಖಲಾಗಿದ್ದ ಆಕೆ 24 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಜನವರಿ 26ರಂದು ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಇದೇ ವೇಳೆ ಕುಟುಂಬಸ್ಥರು ಬಾಲಕಿಯ ಶವವನ್ನು ಮನೆಗೆ ಕೊಂಡೊಯ್ದಿದ್ದಾರೆ. ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗುತ್ತಿದ್ದಾಗ ಬಾಲಕಿಯ ದೇಹದಲ್ಲಿ ರಂಧ್ರಗಳು ಕಂಡುಬಂದಿವೆ. ಒಳಗೆ ಪ್ಲಾಸ್ಟಿಕ್ ಕವರ್‌ಗಳು ಇರುವುದು ಪತ್ತೆಯಾಗಿದೆ. ಹೀಗಾಗಿ ಶಸ್ತ್ರಚಿಕಿತ್ಸೆ ವೇಳೆ ಆಕೆಯ ದೇಹದ ಅಂಗಾಂಗಗಳನ್ನು ಕದ್ದಿರಬಹುದು ಎಂದು ಶಂಕಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬಾಲಕಿಯ ಶವವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲು ವೈದ್ಯಕೀಯ ಮಂಡಳಿಯನ್ನು ಸ್ಥಾಪಿಸುವಂತೆ ಪೊಲೀಸರು ದೆಹಲಿ ಸರ್ಕಾರವನ್ನು ಕೋರಿದ್ದಾರೆ.

Girls Organs Stolen During Surgery Body Stuffed With Plastic Bags Victim Dies In Delhi

Follow us On

FaceBook Google News