ಗೋವಾದಲ್ಲಿ ಬಿಜೆಪಿಗೆ ಶಾಕ್.. ಟಿಎಂಸಿ ಜೊತೆ ಮೈತ್ರಿ ಘೋಷಣೆ ಮಾಡಿದ NGP

ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗೋವಾದಲ್ಲಿ ಆಡಳಿತಾರೂಢ ಬಿಜೆಪಿಗೆ ಬಿಗ್ ಶಾಕ್ ಆಗಿದೆ.

ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗೋವಾದಲ್ಲಿ ಆಡಳಿತಾರೂಢ ಬಿಜೆಪಿಗೆ ಬಿಗ್ ಶಾಕ್ ಆಗಿದೆ. ಮುಂಬರುವ ಗೋವಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಬಿಜೆಪಿಯ ಮಾಜಿ ಮಿತ್ರಪಕ್ಷ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಸೋಮವಾರ ಘೋಷಿಸಿದೆ. ಆದರೆ, ಎನ್‌ಜಿಪಿ ಜತೆಗಿನ ಮೈತ್ರಿ ಕುರಿತು ಬಿಜೆಪಿ ಜತೆ ಮಾತುಕತೆ ನಡೆದಿದೆ ಎಂದು ಬಿಜೆಪಿ ಹೇಳುತ್ತಿರುವ ಹೊತ್ತಿನಲ್ಲಿ ಸೋಮವಾರ ಎನ್‌ಜಿಪಿ ಅಧ್ಯಕ್ಷ ಪಾಂಡುರಂಗ ದೀಪಕ್‌ ಧವಲಿಕರ್‌ ಟಿಎಂಸಿ ಜತೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.

ಸೋಮವಾರದಂದು ಸಭೆ ನಡೆಸಿದ ಪಕ್ಷದ ಕೇಂದ್ರ ಸಮಿತಿಯು ಗೋವಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ನೊಂದಿಗೆ ಕೈಜೋಡಿಸಲು ಸರ್ವಾನುಮತದಿಂದ ನಿರ್ಧರಿಸಿದೆ, ಆದರೆ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾದಾಗ ಮೈತ್ರಿ ಕುರಿತು ಜಂಟಿ ಹೇಳಿಕೆ ನೀಡುವುದಾಗಿ ಸೋಮವಾರ ಎನ್‌ಜಿಪಿ ಅಧ್ಯಕ್ಷ ದೀಪಕ್ ಧವಲೀಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಗೋವಾ ಡಿಸೆಂಬರ್ 13 ರಂದು ಮಮತಾ ಬ್ಯಾನರ್ಜಿ ಗೋವಾಕ್ಕೆ ಭೇಟಿ ನೀಡಲಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today