ದೆಹಲಿ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣದ ಚಿನ್ನ ವಶ
ದೇಶದ ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.
- ದೆಹಲಿಯಲ್ಲಿ 7.8 ಕೋಟಿ ರೂಪಾಯಿ ಮೌಲ್ಯದ ಚಿನ್ನ ವಶ
- ಮಿಲನ್ ನಿಂದ ಆಗಮಿಸಿದ ಇಬ್ಬರು ಪ್ರಯಾಣಿಕರಿಂದ ಚಿನ್ನ ವಶಕ್ಕೆ
- 10 ಕೆಜಿ ಚಿನ್ನವನ್ನು ಪ್ಲಾಸ್ಟಿಕ್ ಲಕೋಟೆಗಳಲ್ಲಿ ಕಳ್ಳಸಾಗಣೆ
Delhi Airport : ದೇಶದ ರಾಜಧಾನಿ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಪ್ರಮಾಣದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಮಿಲನ್ ನಿಂದ ಆಗಮಿಸಿದ ಇಬ್ಬರು ಪ್ರಯಾಣಿಕರಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ 43 ಮತ್ತು 45 ವರ್ಷ ವಯಸ್ಸಿನ ಇಬ್ಬರು ಪುರುಷರು ಮಿಲನ್‌ನಿಂದ ದೆಹಲಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಅವರ ಸಾಮಾನುಗಳನ್ನು ಸ್ಕ್ಯಾನ್ ಮಾಡಿದಾಗ, ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ.
ಭಿಕ್ಷುಕಿಯ ಮನೆ ಮೇಲೆ ಪೊಲೀಸರು ದಾಳಿ! ಚಿನ್ನ, ಬೆಳ್ಳಿ, ದುಬಾರಿ ಮೊಬೈಲ್‌ಗಳು ಪತ್ತೆ
ಆದಾಗ್ಯೂ, ಇಬ್ಬರು ಪ್ರಯಾಣಿಕರನ್ನು ವೈಯಕ್ತಿಕವಾಗಿ ಪರಿಶೀಲಿಸಿದಾಗ, ಸರಿಸುಮಾರು 10 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಪ್ಲಾಸ್ಟಿಕ್ ಲಕೋಟೆಗಳಲ್ಲಿ ಸುತ್ತಿದ ಎರಡು ವಿಶೇಷವಾಗಿ ವಿನ್ಯಾಸಗೊಳಿಸಲಾದ ಸೊಂಟದ ಪಟ್ಟಿಗಳಲ್ಲಿ ಚಿನ್ನದ ನಾಣ್ಯಗಳನ್ನು ಕಳ್ಳಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.
ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು 7.8 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಚಿನ್ನವನ್ನು ವಶಪಡಿಸಿಕೊಂಡ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Gold worth crores seized at Delhi Airport
Our Whatsapp Channel is Live Now 👇