Welcome To Kannada News Today

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ? exam ಬಗ್ಗೆ ಟೆನ್ಷನ್ ಬೇಡ

Good news for SSLC students? This decision to help SSLC Students

🌐 Kannada News :

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ ದೂರದರ್ಶನದ ಚಂದನ ವಾಹಿನಿಯಲ್ಲಿ ಏ. 29ರಿಂದ ಪುನರ್ಮನನ ತರಗತಿ (revision classes) ಆರಂಭಿಸಲಾಗುತ್ತಿದೆ.

ಏ.29ರಿಂದ ಪ್ರತಿ ದಿನ ಮಧ್ಯಾಹ್ನ 3ರಿಂದ 4.30ರವರೆಗೆ ತರಗತಿಗಳು ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ತಿಳಿಸಿದ್ದಾರೆ.

ಮೊದಲ 16 ದಿನ ಪ್ರತಿ 45 ನಿಮಿಷಗಳ ಎರಡು ಅವಧಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ.

18ನೇ ದಿನದಿಂದ ಸಮಾಜ ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು, ನಂತರದ ದಿನಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷಾ ವಿಷಯಗಳ ಬೋಧನೆಯನ್ನೂ ಸಹ ಮಾಡಲಾಗುತ್ತದೆ.

ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ತಡವಾಗಿಯಾದರೂ ಪರೀಕ್ಷೆ ನಡೆಸಿ ಎಂದ sslc ವಿದ್ಯಾರ್ಥಿಗಳು

ಈ ಮಧ್ಯೆ ಯಾವುದೇ ಕಾರಣಕ್ಕೂ ಮುಂದೂಡಿಕೆಯಾಗಿರುವ ಪರೀಕ್ಷೆಯನ್ನು ರದ್ದು ಮಾಡದೇ ನಡೆಸಿ ಎಂದು sslc ವಿದ್ಯಾರ್ಥಿಗಳು ಶಿಕ್ಷಣ ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ.

ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಶ್ರೀ ಎಸ್. ಸುರೇಶ್ ಕುಮಾರ್ ಅವರು ಕೈಗೊಂಡಿರುವ ಮಕ್ಕಳಿಗ ತಾವೇ ನೇರವಾಗಿ ಫೋನ್ ಮಾಡಿ ಮಾತನಾಡುವ ಕಾರ್‍ಯಕ್ರಮದಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ.

ಮೈಸೂರು, ಹಾಸನ, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಸುಮಾರು ಹಲವಾರು ವಿದ್ಯಾರ್ಥಿಗಳಿಗೆ ಕರೆ ಮಾಡಿ ಪರೀಕ್ಷೆಗೆ ಹೇಗೆ ಸಿದ್ಧತೆ ನಡೆಸಿದ್ದೀರಿ, ಪರೀಕ್ಷೆ ಮಾಡಬೇಕೆ ಎಂದು ಸಚಿವರು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಲ್ಲ ಮಕ್ಕಳು, ತಡವಾದ್ರೂ ಪರವಾಗಿಲ್ಲ ಪರೀಕ್ಷೆ ಮಾಡಲೇ ಬೇಕು ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.