ಸುಳ್ಳು ಮಾಹಿತಿ ಹರಡಿದ 16 ಯೂಟ್ಯೂಬ್ ಚಾನೆಲ್ಗಳು ಬಂದ್..!
ಸುಳ್ಳು ಮಾಹಿತಿಯನ್ನು ಹರಡಿದ್ದಕ್ಕಾಗಿ ಕೇಂದ್ರ ಸರ್ಕಾರವು 16 ಯೂಟ್ಯೂಬ್ ಚಾನೆಲ್ಗಳನ್ನು ನಿಷ್ಕ್ರಿಯಗೊಳಿಸಿದೆ
ನವದೆಹಲಿ : ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಫೇಸ್ಬುಕ್ ಖಾತೆ ಮತ್ತು ಆರು ಯೂಟ್ಯೂಬ್ ಚಾನೆಲ್ಗಳು ಸೇರಿದಂತೆ 16 ಯೂಟ್ಯೂಬ್ ಚಾನೆಲ್ಗಳನ್ನು ಕೇಂದ್ರ ಸರ್ಕಾರ ಇಂದು ನಿಷ್ಕ್ರಿಯಗೊಳಿಸಿದೆ.
ನಿಷ್ಕ್ರಿಯಗೊಂಡ YouTube ಚಾನಲ್ಗಳು ಮತ್ತು Facebook ಖಾತೆಗಳು 68 ಮಿಲಿಯನ್ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿವೆ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹೇಳಿಕೆಯಲ್ಲಿ, “ಬ್ಲಾಕ್ ಮಾಡಲಾದ ಯೂಟ್ಯೂಬ್ ಚಾನೆಲ್ಗಳು ಮತ್ತು ಫೇಸ್ಬುಕ್ ಖಾತೆಗಳು ಭಾರತದಲ್ಲಿ ಭೀತಿಯನ್ನು ಸೃಷ್ಟಿಸಲು, ಪ್ರತ್ಯೇಕತಾವಾದವನ್ನು ಪ್ರಚೋದಿಸಲು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರಲು ಸುಳ್ಳು ಮತ್ತು ಪರಿಶೀಲಿಸದ ಮಾಹಿತಿಯನ್ನು ಹರಡುತ್ತಿವೆ” ಎಂದು ಹೇಳಿದೆ.
ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ನಿಯಮ 18 ರ ಅಡಿಯಲ್ಲಿ ಅಗತ್ಯವಿರುವ ಮಾಹಿತಿಯನ್ನು ಅವರ್ಯಾರೂ ಸಚಿವಾಲಯಕ್ಕೆ ಒದಗಿಸಿಲ್ಲ.
Follow Us on : Google News | Facebook | Twitter | YouTube