Welcome To Kannada News Today

Vijay Rupani: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

Vijay Rupani Resigns: ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ: ಗುಜರಾತ್ ಸಿಎಂ ವಿಜಯ್ ರೂಪಾನಿ ಕೆಲವು ನಿಮಿಷಗಳ ಹಿಂದೆ ರಾಜ್ಯಪಾಲರನ್ನು ಭೇಟಿಯಾಗಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.

🌐 Kannada News :

Gujarat CM Vijay Rupani resigns: ಗುಜರಾತಿನ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ (ಇಂದು) ಶನಿವಾರ ಸಂಜೆ ರಾಜೀನಾಮೆ ನೀಡಿದ್ದಾರೆ.

ಮುಂದಿನ ವರ್ಷ ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ದಿಢೀರ್ ಬೆಳವಣಿಗೆಯಲ್ಲಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಇದಕ್ಕೆ ಏನು ಕಾರಣ ಎಂಬುದನ್ನು ಬಹಿರಂಗಪಡಿಸಲಿಲ್ಲ.

ಪ್ರಧಾನಿ ನರೇಂದ್ರ ಮೋದಿಯವರ (Prime Minister Narendra modi) ತವರು ರಾಜ್ಯದಲ್ಲಿ ಅತ್ಯಂತ ನಿರೀಕ್ಷಿತ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳ ಮುನ್ನ ಈ ಬೆಳವಣಿಗೆ ನಡೆದಿದೆ.

ಉತ್ತರಾಖಂಡದ ತಿರಾತ್ ಸಿಂಗ್ ರಾವತ್ , ಕರ್ನಾಟಕದ ಬಿ.ಎಸ್. ಯಡಿಯೂರಪ್ಪ (B. S. Yediyurappa) ನಂತರ ಈ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೂರನೇ ಮುಖ್ಯಮಂತ್ರಿ  ವಿಜಯ್ ರೂಪಾನಿ ಆಗಿದ್ದಾರೆ.

ಶನಿವಾರ ರಾಜ್ ಭವನದಲ್ಲಿ ವಿಜಯ್ ರೂಪಾನಿ ರಾಜ್ಯಪಾಲ ಆಚಾರ್ಯ ದೇವವ್ರತ್ (Acharya Devvrat) ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.

ವಿಜಯ್ ರೂಪಾನಿ ರಾಜೀನಾಮೆ - Kannada News
ವಿಜಯ್ ರೂಪಾನಿ ರಾಜೀನಾಮೆ

2016 ಆಗಸ್ಟ್ ಏಳರಿಂದ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಪ್ರಸ್ತುತ ಪಶ್ಟಿಮ ರಾಜ್ ಕೋಟ್ (Rajkot) ಕ್ಷೇತ್ರದಿಂದ ಗುಜರಾತ್ ವಿಧಾನಸಭೆಯ ಸದಸ್ಯರಾಗಿದ್ದಾರೆ.

ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ವಿಜಯ್ ರೂಪಾನಿ, ಬಿಜೆಪಿ ಕೇಂದ್ರ ನಾಯಕತ್ವ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು. “ಈಗ ಗುಜರಾತ್ ಅಭಿವೃದ್ಧಿಯ ಈ ಪ್ರಯಾಣವು ಪ್ರಧಾನಿಯವರ ನಾಯಕತ್ವದಲ್ಲಿ ಹೊಸ ಉತ್ಸಾಹ ಮತ್ತು ಹೊಸ ಶಕ್ತಿಯೊಂದಿಗೆ ಮುಂದುವರಿಯಬೇಕು ಎಂದು ನಾನು ಅಂದುಕೊಂಡಿದ್ದೇನೆ. ಇದನ್ನು ಗಮನದಲ್ಲಿಟ್ಟುಕೊಂಡು, ನಾನು ಗುಜರಾತ್ ಮುಖ್ಯಮಂತ್ರಿಯ ಜವಾಬ್ದಾರಿಯಿಂದ ರಾಜೀನಾಮೆ ನೀಡುತ್ತಿದ್ದೇನೆ.” ಎಂದಿದ್ದಾರೆ.

ವಿಜಯ್ ರೂಪಾನಿ ಅವರು ಬಿಜೆಪಿ ಕಾರ್ಯಕರ್ತರಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದರು. “ಈಗ, ಪಕ್ಷದಿಂದ ನನಗೆ ಯಾವುದೇ ಜವಾಬ್ದಾರಿ ನೀಡಿದರೂ, ನಾನು ಸಂಪೂರ್ಣ ಜವಾಬ್ದಾರಿ ಮತ್ತು ಹೊಸ ಶಕ್ತಿಯೊಂದಿಗೆ ಪ್ರಧಾನ ಮಂತ್ರಿಗಳ ನೇತೃತ್ವದಲ್ಲಿ ಮತ್ತು (ಬಿಜೆಪಿ – BJP) ರಾಷ್ಟ್ರೀಯ ಅಧ್ಯಕ್ಷರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದರು.

Web Title :

Get Latest Kannada News an up-to-date news coverage

ಕ್ಷಣ ಕ್ಷಣದ ಕನ್ನಡ ಸುದ್ದಿಗಳಿಗಾಗಿ FacebookTwitterYouTube ಅನುಸರಿಸಿ.