ಬಿಪಿನ್ ರಾವತ್ ಬಗ್ಗೆ ಅಸಭ್ಯ ಹೇಳಿಕೆ.. ಗುಜರಾತಿ ವ್ಯಕ್ತಿ ಬಂಧನ
ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಅವರ ಬಗ್ಗೆ ಅಸಭ್ಯ ಹೇಳಿಕೆ ನೀಡಿದ 44 ವರ್ಷದ ಗುಜರಾತಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಹಮದಾಬಾದ್: ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಅವರ ಬಗ್ಗೆ ಅಸಭ್ಯ ಹೇಳಿಕೆ ನೀಡಿದ 44 ವರ್ಷದ ಗುಜರಾತಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಎರಡು ಸಮುದಾಯಗಳ ನಡುವೆ ದ್ವೇಷವನ್ನು ಹುಟ್ಟುಹಾಕಿದ್ದಕ್ಕಾಗಿ ಅವರನ್ನು ಸೆಕ್ಷನ್ 153-ಎ ಅಡಿಯಲ್ಲಿ ಬಂಧಿಸಲಾಗಿದೆ. ಧರ್ಮವನ್ನು ಅವಮಾನಿಸಿದ ಆರೋಪದ ಮೇಲೆ ಸೆಕ್ಷನ್ 295-ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಹಮದಾಬಾದ್ನಲ್ಲಿ ಸೈಬರ್ ಕ್ರೈಂ ಸೆಲ್ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಮ್ರೇಲಿ ಜಿಲ್ಲೆಯ ರಾಜುಲಾ ತಾಲೂಕಿನ ನಿವಾಸಿ ಶಿವಭಾಯಿ ರಾಮ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆಯೂ ಶಿವಭಾಯಿ ರಾಮ್ ಪದೇ ಪದೇ ಅನುಚಿತ ಪೋಸ್ಟ್ ಹಾಕಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಆದರೆ, ಈಗ ಬಿಪಿನ್ ರಾವತ್ ಕುರಿತು ಮಾಡಿರುವ ಯಾವುದೇ ಕಾಮೆಂಟ್ಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.
Follow Us on : Google News | Facebook | Twitter | YouTube