ಡೆಂಗ್ಯೂ ಬಗ್ಗೆ ಮನ್ಸುಖ್ ಮಾಂಡವಿಯಾ ಪರಿಶೀಲನಾ ಸಭೆ

ರಾಷ್ಟ್ರ ರಾಜಧಾನಿ ದೆಹಲಿ (National capital Delhi) ಸೇರಿದಂತೆ ಹಲವು ರಾಜ್ಯಗಳನ್ನು ಕಾಡುತ್ತಿರುವ ಡೆಂಗ್ಯೂ ಮಹಾಮಾರಿ (Dengue epidemic) ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಕಳವಳ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ (Delhi) ಸೇರಿದಂತೆ ಹಲವು ರಾಜ್ಯಗಳನ್ನು ಕಾಡುತ್ತಿರುವ ಡೆಂಗ್ಯೂ ಮಹಾಮಾರಿ (Dengue epidemic) ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಕಳವಳ ವ್ಯಕ್ತಪಡಿಸಿದ್ದಾರೆ. 

ವ್ಯಾಪಕವಾಗಿರುವ ಈ ರೋಗ ದೆಹಲಿಯಲ್ಲಿ ಈಗಾಗಲೇ ಆರು ಮಂದಿಯನ್ನು ಬಲಿ ತೆಗೆದುಕೊಂಡಿದೆ. ದೆಹಲಿಯಲ್ಲಿ ಈಗಾಗಲೇ 1,530 ಡೆಂಗ್ಯೂ ಪ್ರಕರಣಗಳಿವೆ.

ಕಳೆದ ನಾಲ್ಕು ವರ್ಷಗಳಲ್ಲಿ ದೆಹಲಿಯಲ್ಲಿ ಇಷ್ಟೊಂದು ಪ್ರಕರಣಗಳು ದಾಖಲಾಗಿರುವುದು ಇದೇ ಮೊದಲು. ಇದರೊಂದಿಗೆ ಸಚಿವ ಮನ್ಸುಖ್ ಮಾಂಡವಿಯಾ ಅವರು ದೆಹಲಿ ರಾಜ್ಯದ ಸಂಬಂಧಪಟ್ಟ ವೈದ್ಯಕೀಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಸಚಿವ ಮನ್ಸುಖ್ ಮಾಂಡವಿಯಾ ಮಾತನಾಡಿದರು. ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳನ್ನು ಗುರುತಿಸಿ ಆ ರಾಜ್ಯಗಳಿಗೆ ಸಂಬಂಧಿತ ತಜ್ಞರನ್ನು ಕಳುಹಿಸುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ (Union Health Secretary Rajesh Bhushan) ಅವರಿಗೆ ಸೂಚಿಸಲಾಗಿದೆ. ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ನೆರವು ನೀಡುವ ಭರವಸೆ ನೀಡಲಾಗಿದೆ.

Stay updated with us for all News in Kannada at Facebook | Twitter
Scroll Down To More News Today