ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ
ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಭಯೋತ್ಪಾದನೆ ಮುಂದುವರಿದಿದೆ, ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ
Srinagar : ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಭಯೋತ್ಪಾದನೆ ಮುಂದುವರಿದಿದೆ. ಈ ಪ್ರದೇಶದಲ್ಲಿ ಕೆಲ ದಿನಗಳಿಂದ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ನಡೆಯುತ್ತಿದೆ. ಶನಿವಾರವೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಗುಂಡಿನ ದಾಳಿ (Encounter) ಆರಂಭವಾಗಿದೆ.
ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಬಿಹಾರ ದೆಹಲಿ ರೈಲು, ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್‌ಗೆ ಬಾಂಬ್ ಬೆದರಿಕೆ
ಶುಕ್ರವಾರ ಉತ್ತರ ಪ್ರದೇಶದ ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಇದರಿಂದ ಎಚ್ಚೆತ್ತ ಭದ್ರತಾ ಪಡೆಗಳು ಮತ್ತು ಪೊಲೀಸರು ಜಂಟಿಯಾಗಿ ಪ್ರದೇಶದಲ್ಲಿ ಸರ್ಚ್ ಕಾರ್ಯಾಚರಣೆ ಆರಂಭಿಸಿದರು.
ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದಾಗ ಎಚ್ಚೆತ್ತ ಭಾರತೀಯ ಪಡೆಗಳು ಪ್ರತಿಯಾಗಿ ಗುಂಡಿನ ದಾಳಿ ನಡೆಸಿವೆ. ಅಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಯವರೆಗೆ, ಎರಡೂ ಕಡೆ ಯಾವುದೇ ಜೀವ ಹಾನಿಯ ವರದಿಯಾಗಿಲ್ಲ.
Heavy Firing In The Khanyar Area Of Srinagar As Security Forces Conducted Cordon And Search Operations