ಭಾರೀ ಪ್ರವಾಹದಲ್ಲಿ ಸಿಲುಕಿದ ಕಾರು, Video ವೈರಲ್

 ಉತ್ತರ ಖಂಡದಲ್ಲಿ ಭಾರೀ ಮಳೆ ಅವಾಂತರ ಸೃಷ್ಟಿಸುತ್ತಿದೆ. ನೈನಿತಾಲ್, ತಪೋವನ್ ಮತ್ತು ಚಂದ್ರಬಾಗ ನದಿಗಳು ಈಗಾಗಲೇ ತುಂಬಿ ಹರಿಯುತ್ತಿವೆ.

ಡೆಹ್ರಾಡೂನ್:  ಉತ್ತರ ಖಂಡದಲ್ಲಿ ಭಾರೀ ಮಳೆ ಅವಾಂತರ ಸೃಷ್ಟಿಸುತ್ತಿದೆ. ನೈನಿತಾಲ್, ತಪೋವನ್ ಮತ್ತು ಚಂದ್ರಬಾಗ ನದಿಗಳು ಈಗಾಗಲೇ ತುಂಬಿ ಹರಿಯುತ್ತಿವೆ.

ಹಲವೆಡೆ ರಸ್ತೆಗಳಲ್ಲಿ ಭೂಕುಸಿತಗಳು ಸಂಭವಿಸಿದೆ. ಏತನ್ಮಧ್ಯೆ, ಬದರಿನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಂಬಗಡಿನಲ್ಲಲ್ಲಿ ಭೂಕುಸಿತ ಸಂಭವಿಸಿದ ನಂತರ ಕಾರೊಂದು ರಸ್ತೆಯಲ್ಲಿ ಸಿಲುಕಿಕೊಂಡಿತ್ತು. ಅಧಿಕಾರಿಗಳು ತಕ್ಷಣ ಪ್ರತಿಕ್ರಿಯಿಸಿ ಕ್ರೇನ್ ಸಹಾಯದಿಂದ ಕಾರನ್ನು ಸುರಕ್ಷಿತವಾಗಿ ಹೊರಗೆ ತಂದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಪ್ರಧಾನಿ ಮೋದಿ ಈಗಾಗಲೇ ಉತ್ತರಾಖಂಡ ಸಿಎಂ ಪುಷ್ಕರ್ ಧಾಮಿಯೊಂದಿಗೆ ಪ್ರವಾಹದ ಕುರಿತು ದೂರವಾಣಿಯಲ್ಲಿ ಮಾತನಾಡಿದ್ದಾರೆ. ಜಾಗರೂಕರಾಗಿರಲು ಆದೇಶಿಸಲಾಗಿದೆ. ಕೇಂದ್ರದಿಂದ ಸಂಪೂರ್ಣ ನೆರವು ನೀಡಲಾಗುವುದು ಎಂಬ ಭರವಸೆ ನೀಡಲಾಗಿದೆ. ಪ್ರವಾಹದಿಂದ ಈಗಾಗಲೇ ಮೂವರು ನೇಪಾಳದ ಕಾರ್ಮಿಕರು ಮತ್ತು ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today