ಮಹಾರಾಷ್ಟ್ರದಲ್ಲಿ ಭಾರೀ ಮಳೆ
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಸತತ ಮೂರು ದಿನಗಳಿಂದ ಸುರಿದ ಮಳೆಗೆ ರತ್ನಗಿರಿ ಪಟ್ಟಣ ಜಲಾವೃತ
ಮುಂಬೈ: ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಸತತ ಮೂರು ದಿನಗಳಿಂದ ಸುರಿದ ಮಳೆಗೆ ರತ್ನಗಿರಿ ಪಟ್ಟಣ ಜಲಾವೃತವಾಗಿದೆ. ಲಮ್ಜಾ ತಾಲೂಕಿನ ದತ್ತ ದೇವಸ್ಥಾನಕ್ಕೆ ನೀರು ನುಗ್ಗಿದೆ. ದೇವಸ್ಥಾನದ ಅರ್ಧ ಭಾಗ ಪ್ರವಾಹದಲ್ಲಿ ಮುಳುಗಿದೆ. ಮಳೆ ಇದೇ ರೀತಿ ಮುಂದುವರಿದರೆ ದೇವಸ್ಥಾನದ ಮೇಲ್ಭಾಗಕ್ಕೆ ನೀರು ನುಗ್ಗಲಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದರು.
ದತ್ತ ದೇವಸ್ಥಾನಕ್ಕೆ ಭೇಟಿ ನೀಡಲು ಅನೇಕ ಸ್ಥಳಗಳಿಂದ ಭಕ್ತರು ಬರುತ್ತಾರೆ. ಮತ್ತೊಂದೆಡೆ ಮುಂಬೈ ನಗರದಲ್ಲಿ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಸೂಕ್ತ ವ್ಯವಸ್ಥೆ ಮಾಡುವಂತೆ ರಾಜ್ಯ ಸರ್ಕಾರವು ಥಾಣೆ, ಪಾಲ್ಘರ್, ರಾಯಗಡ, ರತ್ನಗಿರಿ, ಸಿಂಧುದುರ್ಗ ಮತ್ತು ಕೊಲ್ಹಾಪುರ ಜಿಲ್ಲಾಡಳಿತಕ್ಕೆ ಸೂಚಿಸಿದೆ.
Heavy rains flooding Maharashtra