Heavy Rains: ಅಸ್ಸಾಂನಲ್ಲಿ ಭಾರೀ ಮಳೆ, ಭೂಕುಸಿತಕ್ಕೆ ನಾಲ್ವರು ಬಲಿ

ಗುವಾಹಟಿ: ಅಸ್ಸಾಂನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ (Heavy Rains). ಭಾರೀ ಮಳೆಯ ನಡುವೆ ಗುವಾಹಟಿಯ ಬೋರಗಾಂವ್‌ನಲ್ಲಿ ಭೂಕುಸಿತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ. ಕಾಮಾಖ್ಯ, ಖರ್ಗುಲಿ, ಹೆಂಗರಾಬರಿ, ಸಿಲ್ಪುಖುರಿ ಮತ್ತು ಚಂದಮಾರಿ ಕಾಲೋನಿಗಳು ಸೇರಿದಂತೆ ಹಲವೆಡೆ ಭೂಕುಸಿತ ಸಂಭವಿಸಿದೆ. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜಿಲ್ಲಾ ಯೋಜನಾಧಿಕಾರಿ ಕೌಸ್ತವ್ ತಿಳಿಸಿದ್ದಾರೆ.
ಈ ವರ್ಷ ಇದುವರೆಗೆ ಪ್ರವಾಹ ಮತ್ತು ಭೂಕುಸಿತದಿಂದ 42 ಜನರು ಸಾವನ್ನಪ್ಪಿದ್ದಾರೆ. ಸ್ಮಾರ್ಟ್ ಸಿಟಿಯ ನೂರಾರು ಮನೆಗಳಿಗೆ ಪ್ರವಾಹದ ನೀರು ನುಗ್ಗಿದೆ.
ಅಲ್ಲದೆ ವಾಹನಗಳ ಇಂಜಿನ್‌ಗಳಿಗೆ ನೀರು ನುಗ್ಗಿದ್ದರಿಂದ ಶಾಲಾ ವಾಹನಗಳು ಸೇರಿದಂತೆ ಹಲವು ವಾಹನಗಳು ರಸ್ತೆಯಲ್ಲಿ ನಿಂತಿದ್ದವು. ಗಂಟೆಗಟ್ಟಲೆ ವಾಹನಗಳು ನಿಂತಿದ್ದರಿಂದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜೂ ರಸ್ತೆ, ಆರ್‌ಜಿ ಬರೂಹ್ ರಸ್ತೆ, ಜಿಎಸ್ ರಸ್ತೆ, ನಬಿನ್ ನಗರ, ಅನಿಲ್ ನಗರ, ಹಟಿಗಾಂವ್, ಗಣೇಶಗುರಿ, ಹೈದ್ಯತ್‌ಪುರದ ಎಂಎಲ್‌ಎ ಕ್ವಾರ್ಟರ್ಸ್, ದಿಸ್‌ಪುರ್, ಲಚಿತ್ ನಗರ, ತರುಣ್ ನಗರ, ಜ್ಯೋತಿಕುಚಿ, ಘೋರಮಾರಾ, ವಿಐಪಿ ರಸ್ತೆ, ರಾಜ್ ರಸ್ತೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಹಲವರು ಬೇರೆ ಪ್ರದೇಶಗಳಿಗೆ ಗುಳೆ ಹೋಗಿದ್ದಾರೆ. ಅಧಿಕಾರಿಗಳು ಸ್ಪಂದಿಸದ ಕಾರಣ ಕುಡಿಯುವ ನೀರಿಗೆ ತೊಂದರೆಯಾಗಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಎಲ್ಲ ಪ್ರಮುಖ ರಸ್ತೆಗಳಲ್ಲಿ ಮೊಣಕಾಲಿನವರೆಗೂ ನೀರು ತುಂಬಿಕೊಂಡಿದ್ದು, ಕೆಲವೆಡೆ ಸೊಂಟದವರೆಗೂ ನೀರು ನಿಂತಿದೆ.
ಗುವಾಹಟಿ ರೈಲು ನಿಲ್ದಾಣದ ಸಮೀಪ ರಸ್ತೆಯೂ ಮುಳುಗಡೆಯಾಗಿದೆ. ಏತನ್ಮಧ್ಯೆ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. 17ರವರೆಗೆ ಈಶಾನ್ಯ ರಾಜ್ಯಗಳ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Heavy Rains In Assam 4 Dead Amid Landslides
ನಾಳೆಯ ದಿನ ಭವಿಷ್ಯ: 12-11-2026, ಗುರುವಾರ
Read the story
ಹಾಸನಾಂಬೆ ಜಾತ್ರೆಗೆ ತೆರೆ; ಮತ್ತೆ ದೇವಿ ದರ್ಶನಕ್ಕೆ ಒಂದು ವರ್ಷ ಕಾಯಬೇಕು
Read the story
ನಮಗೂ 3,600 ದರ ನೀಡಿ; ಹಾವೇರಿ ಕಬ್ಬು ಬೆಳೆಗಾರರ ಪಟ್ಟು
Read the story
ತಾತನ ಆಸ್ತಿಯಲ್ಲಿ ಮೊಮ್ಮಗನಿಗೆ ಹಕ್ಕಿಲ್ಲ! ಹೈಕೋರ್ಟ್ ಮಹತ್ವದ ತೀರ್ಪು
Read the story
ಗುಡ್ ನ್ಯೂಸ್; ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಮತ್ತೆ ವಿಸ್ತರಣೆ
Read the story




