Heavy Rains ಮಹಾರಾಷ್ಟ್ರ ಕರ್ನಾಟಕ ಮುಂಬೈನಲ್ಲಿ ಭಾರೀ ಮಳೆ
Heavy Rains: ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಗುರುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು
Heavy Rains: ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಗುರುವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿತ್ತು. ಕಳೆದ 24 ಗಂಟೆಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕದಲ್ಲಿ ಮಳೆಯಾಗುತ್ತಿರುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ನೈಋತ್ಯ ಮಾನ್ಸೂನ್ ಪ್ರಭಾವದಿಂದ ದೇಶಾದ್ಯಂತ ಭಾರೀ ಮಳೆಯಾಗುತ್ತಿದೆ.
ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪುಣೆ, ಸತಾರಾ ಮತ್ತು ಕೊಲ್ಲಾಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕೊಲ್ಲಾಪುರ ಜಿಲ್ಲೆಯಲ್ಲಿ ಪಂಚಗಂಗಾ ನದಿ ಉಕ್ಕಿ ಹರಿಯುತ್ತಿದೆ. ಮುಂದಿನ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಂಚಗಂಗಾ ನದಿಯೊಂದಿಗೆ ದೂದ್ ಗಂಗಾ, ಹಿರಣ್ಯಕೇಶಿ, ಘಟಪ್ರಭಾ ನದಿಗಳಲ್ಲಿ ಹರಿವಿನ ತೀವ್ರತೆ ಹೆಚ್ಚಿದೆ. ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದು ಸ್ಥಳೀಯ ರೈಲುಗಳು ಮತ್ತು ಕೇಂದ್ರ ರೈಲ್ವೇ ಮೇಲೆ ತೀವ್ರ ಪರಿಣಾಮ ಬೀರಿದೆ.
Heavy Rains In Maharashtra Karnataka Mumbai
Follow Us on : Google News | Facebook | Twitter | YouTube