ಪುದುಚೇರಿಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ಇಲ್ಲವಾದಲ್ಲಿ ರೂ.1000 ದಂಡ
ರಸ್ತೆ ಅಪಘಾತಗಳನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಇತ್ತೀಚೆಗೆ ಈ ಪಟ್ಟಿಗೆ ಸೇರಿದೆ.
ದ್ವಿಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂಬ ನಿಯಮವನ್ನು ಪುದುಚೇರಿ ಪೊಲೀಸರು ಭಾನುವಾರದಿಂದ ಜಾರಿಗೊಳಿಸಲು ಆರಂಭಿಸಿದ್ದಾರೆ.

ಹೆಲ್ಮೆಟ್ ಧರಿಸದೇ ಇದ್ದರೆ 1000 ರೂಪಾಯಿ ದಂಡ ತೆರಬೇಕೆಂದು ಪುದುಚೇರಿ ಪೊಲೀಸರು ನಿಬಂಧನೆ ವಿಧಿಸಿದ್ದಾರೆ. ಇದರಿಂದ ಪುದುಚೇರಿಯಾದ್ಯಂತ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ಸಂಚರಿಸುತ್ತಿದ್ದ ದೃಶ್ಯ ಕಂಡು ಬಂತು. ದಂಡ ಪಾವತಿಸಲು ಸಾಧ್ಯವಾಗದ ಕಾರಣ ವಾರಾಂತ್ಯದ ಪ್ರವಾಸಿಗರು ಹೆಲ್ಮೆಟ್ ಧರಿಸುತ್ತಿದ್ದಾರೆ.
ನಮ್ಮ ತಂಡದ ಹೊಸ ತಾಣ : Timesnib
ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಹೆಲ್ಮೆಟ್ ಬಳಸದ ಚಾಲಕರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪುದುಚೇರಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಾಹನ ಚಾಲಕರ ಪ್ರಾಣ ರಕ್ಷಣೆಗಾಗಿ ಹೆಲ್ಮೆಟ್ ನಿಯಮ ಜಾರಿಗೆ ತರಲಾಗುತ್ತಿದೆ ಎಂದರು. ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕೆ ಕೈಲಾಸ ನಾಥನ್ ಶುಕ್ರವಾರ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆಲ್ಮೆಟ್ ಧರಿಸುವುದರಿಂದ ತಲೆಗೆ ಗಂಭೀರ ಅವಘಡಗಳಿಂದ ರಕ್ಷಣೆ ದೊರೆಯುತ್ತದೆ ಹಾಗೂ ಪ್ರಾಣಾಪಾಯ ತಪ್ಪುತ್ತದೆ ಎಂದರು.