ಅನಂತನಾಗ್‌ನಲ್ಲಿ ಎನ್‌ಕೌಂಟರ್.. ಹಿಜ್ಬುಲ್ ಕಮಾಂಡರ್ ಹತ್ಯೆ
ಜಮ್ಮು ಕಾಶ್ಮೀರದ ಅನಂತನಾಗ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಕಮಾಂಡರ್ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಶನಿವಾರ ಬೆಳಗ್ಗೆ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಹತನಾಗಿದ್ದಾನೆ.
ಶುಕ್ರವಾರ ಸಂಜೆ ಜಿಲ್ಲೆಯ ರಿಶಿಪೋರಾ ಗ್ರಾಮದ ಕಪ್ರಾನ್ ಪ್ರದೇಶದಲ್ಲಿ ಸ್ಥಳೀಯ ಪೊಲೀಸರು ಮತ್ತು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ. ಶನಿವಾರ ಮುಂಜಾನೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ನಡೆದಿದೆ.
ಎನ್‌ಕೌಂಟರ್‌ನಲ್ಲಿ ನಿಷೇಧಿತ ಹಿಜ್ಬುಲ್ ಕಮಾಂಡರ್ ನಿಸಾರ್ ಖಾಂಡೆಯನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಐಜಿ ವಿಜಯ್ ಕುಮಾರ್ ಹೇಳಿದ್ದಾರೆ. ಉಗ್ರರ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹಾಗೂ ಓರ್ವ ನಾಗರಿಕ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅವರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಉಗ್ರರಿಂದ ಎಕೆ-47 ರೈಫಲ್ ಸೇರಿದಂತೆ ಸ್ಫೋಟಕಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಈ ಪ್ರದೇಶದಲ್ಲಿ ಇನ್ನೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಹೇಳಿದರು.
Hizbul Commander Killed In Encounter In Jammu Kashmir Anantnag
Follow us On
Google News |