ದೀಪಾವಳಿ ಹಬ್ಬದ ದಿನವೇ ದುರಂತ, ರಸ್ತೆ ಅಪಘಾತದಲ್ಲಿ ಮಗು ಸೇರಿ ಆರು ಮಂದಿ ಸಾವು

Story Highlights

ದೀಪಾವಳಿ ಹಬ್ಬದ ದಿನವೇ ದುರಂತ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇತರ ಐವರು ಗಾಯಗೊಂಡಿದ್ದಾರೆ.

ದೀಪಾವಳಿ ಹಬ್ಬದ ದಿನ ದುರಂತ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ (Road Accident) ಆರು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇತರ ಐವರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಬದೌನ್‌ನ (UP Badaun) ಮುಜಾರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮೀರತ್ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ಗುರುವಾರ ಬೆಳಗ್ಗೆ ಮುಜಾರಿಯಾ ಗ್ರಾಮದ ಬಳಿ ಟ್ರ್ಯಾಕ್ಟರ್ ಟೆಂಪೋಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟೆಂಪೋದಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ. ಆಗ ಹಿಂದಿನಿಂದ ಬಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಕಾರು ಪ್ರಯಾಣಿಕರೂ ಗಾಯಗೊಂಡಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅವರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಮೃತರನ್ನು ನೋಯ್ಡಾ (Noida) ಮೂಲದವರೆಂದು ಗುರುತಿಸಲಾಗಿದೆ. ದೀಪಾವಳಿ ಹಬ್ಬಕ್ಕೆಂದು ನೋಯ್ಡಾಗೆ ವಾಪಸ್ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆದ್ದಾರಿಯಲ್ಲಿ ರಾಂಗ್ ರೂಟ್ ನಲ್ಲಿ ಬಂದ ಟ್ರ್ಯಾಕ್ಟರ್ ಟೆಂಪೋಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಬಳಿಕ ಹಿಂದಿನಿಂದ ಬಂದ ಕಾರು ಸಹ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ಗಾಯಾಳುಗಳ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆರು ಜನರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದರು. ಮೃತರಲ್ಲಿ ಒಂದು ಮಗು ಕೂಡ ಸೇರಿದೆ.

ಮೃತರ ಪೈಕಿ ಓರ್ವನನ್ನು ಮಿರ್ಜಾಪುರ ನಿವಾಸಿ ಎಂದು ಪೊಲೀಸರು ಗುರುತಿಸಿದ್ದಾರೆ. ಅಪಘಾತದ ಬಳಿಕ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Horrible Road Accident In UP Badaun 6 People Died Five Injured

Related Stories