ಕೋವಿಡ್ 19, ದೇಶದಲ್ಲಿ 12,428 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು

ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 12,428 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 356 ಮಂದಿ ಸಾವನ್ನಪ್ಪಿದ್ದಾರೆ.

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 12,428 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, 356 ಮಂದಿ ಸಾವನ್ನಪ್ಪಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ 15,951 ಜನರು ಕರೋನಾದಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಪ್ರಸ್ತುತ 1,63,816 ಪ್ರಕರಣಗಳು ಸಕ್ರಿಯವಾಗಿವೆ.

ಕೇರಳದಲ್ಲಿ ನಿನ್ನೆ ಒಂದೇ ದಿನದಲ್ಲಿ 6,664 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. 53 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇರಳ ಆರೋಗ್ಯ ಸಚಿವಾಲಯ ತಿಳಿಸಿದೆ.

Stay updated with us for all News in Kannada at Facebook | Twitter
Scroll Down To More News Today