India Corona Update: ದೇಶದಲ್ಲಿ 4575 ಹೊಸ ಕರೋನಾ ಪ್ರಕರಣಗಳು

India Corona Update: ದೇಶಾದ್ಯಂತ 4575 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4,29,75,883ಕ್ಕೆ ಏರಿಕೆಯಾಗಿದೆ.

ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೊಂಚ ಹೆಚ್ಚಿದೆ. ಮಂಗಳವಾರ 3,000 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಇತ್ತೀಚಿನ ಪಾಸಿಟಿವ್ ಪ್ರಕರಣಗಳ ಸಂಖ್ಯೆ 4,500 ಕ್ಕೆ ಏರಿಕೆಯಾಗಿವೆ..

ದೇಶಾದ್ಯಂತ 4575 ಹೊಸ ಕರೋನಾ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 4,29,75,883ಕ್ಕೆ ಏರಿಕೆಯಾಗಿದೆ. ಇವರಲ್ಲಿ 4,24,13,566 ಮಂದಿ ಕರೋನಾದಿಂದ ಚೇತರಿಸಿಕೊಂಡಿದ್ದಾರೆ. ಇನ್ನೂ 5,15,355 ಸೋಂಕಿತರು ಸಾವನ್ನಪ್ಪಿದ್ದಾರೆ ಮತ್ತು 46,962 ಪ್ರಕರಣಗಳು ಸಕ್ರಿಯವಾಗಿವೆ.

ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ 145 ಜನರು ಸಾವನ್ನಪ್ಪಿದ್ದಾರೆ ಮತ್ತು 7416 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಒಟ್ಟು ಪ್ರಕರಣಗಳಲ್ಲಿ ಶೇ.0.11ರಷ್ಟು ಮಾತ್ರ ಸಕ್ರಿಯವಾಗಿದ್ದು, ಶೇ.98.69ರಷ್ಟು ಚೇತರಿಸಿಕೊಂಡಿವೆ. 1.20 ರಷ್ಟು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮತ್ತು 1,79,33,99,555 ಡೋಸ್ ಕರೋನಾ ಲಸಿಕೆಗಳನ್ನು ವಿತರಿಸಲಾಗಿದೆ. ಮಂಗಳವಾರವಷ್ಟೇ 18,69,103 ಮಂದಿಗೆ ಲಸಿಕೆ ಹಾಕಲಾಗಿದೆ.

Follow Us on : Google News | Facebook | Twitter | YouTube