ಏರ್ ಇಂಡಿಯಾ, ಇಂಡಿಗೋ ವಿಮಾನಗಳಿಗೆ ಸರಣಿ ಬಾಂಬ್ ಬೆದರಿಕೆ, ವಿಮಾನ ತುರ್ತು ಭೂಸ್ಪರ್ಶ

Story Highlights

ಸರಣಿ ಬಾಂಬ್ ಬೆದರಿಕೆ (Bomb Threat) ದೇಶದಲ್ಲಿ ಸಂಚಲನ ಮೂಡಿಸುತ್ತಿದೆ. ಏರ್ ಇಂಡಿಯಾ ಸೇರಿದಂತೆ ಎರಡು ಇಂಡಿಗೋ ವಿಮಾನಗಳಿಗೆ ಇದೇ ರೀತಿಯ ಬೆದರಿಕೆಗಳು ಬಂದಿವೆ.

ಸರಣಿ ಬಾಂಬ್ ಬೆದರಿಕೆ (Bomb Threat) ದೇಶದಲ್ಲಿ ಸಂಚಲನ ಮೂಡಿಸುತ್ತಿದೆ. ಏರ್ ಇಂಡಿಯಾ (Air India) ಸೇರಿದಂತೆ ಎರಡು ಇಂಡಿಗೋ ವಿಮಾನಗಳಿಗೆ (indigo Flights) ಇದೇ ರೀತಿಯ ಬೆದರಿಕೆಗಳು ಬಂದಿವೆ.

ಈ ಹಿಂದೆ ಮುಂಬೈನಿಂದ ನ್ಯೂಯಾರ್ಕ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದರಿಂದ ಎಚ್ಚೆತ್ತ ಪೈಲಟ್ ವಿಮಾನವನ್ನು ದೆಹಲಿ ವಿಮಾನನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದಾರೆ. ನಂತರ ಈಗ ಇಂಡಿಗೋದ ಎರಡು ವಿಮಾನಗಳಿಗೆ ಇದೇ ರೀತಿಯ ಬೆದರಿಕೆಗಳು ಬಂದಿವೆ.

ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ, ದೆಹಲಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ

ಮುಂಬೈನಿಂದ ಜಿದ್ದಾಗೆ ತೆರಳುತ್ತಿದ್ದ 6ಇ 56 ಮತ್ತು ಮುಂಬೈನಿಂದ ಮಸ್ಕತ್‌ಗೆ ತೆರಳುತ್ತಿದ್ದ 6ಇ 1275 ವಿಮಾನಕ್ಕೆ ಸರಣಿ ಬಾಂಬ್ ಬೆದರಿಕೆಗಳು ಬಂದಿವೆ. ಕೂಡಲೇ ಎಚ್ಚೆತ್ತ ಸಿಬ್ಬಂದಿ ವಿಮಾನವನ್ನು ಐಸೋಲೇಶನ್ ರನ್‌ವೇಗೆ ಸ್ಥಳಾಂತರಿಸಿದ್ದಾರೆ ಎಂದು ಇಂಡಿಗೋ ವಕ್ತಾರರು ತಿಳಿಸಿದ್ದಾರೆ. ಪ್ರೋಟೋಕಾಲ್ ಪ್ರಕಾರ ಎಲ್ಲಾ ಭದ್ರತಾ ತಪಾಸಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಸೋಮವಾರ ಬೆಳಗ್ಗೆ ಏರ್ ಇಂಡಿಯಾ ವಿಮಾನ ಎಐ119 ಮುಂಬೈನಿಂದ ನ್ಯೂಯಾರ್ಕ್‌ಗೆ 239 ಪ್ರಯಾಣಿಕರೊಂದಿಗೆ ತೆರಳುತ್ತಿತ್ತು. ಈ ಕ್ರಮದಲ್ಲಿ ವಿಮಾನದಲ್ಲಿ ಬಾಂಬ್ ಬೆದರಿಕೆ ಇರುವ ಬಗ್ಗೆ ಸಿಬ್ಬಂದಿ ಎಟಿಸಿಗೆ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ತುರ್ತು ಲ್ಯಾಂಡಿಂಗ್‌ಗೆ ಅನುಮತಿ ನೀಡಲಾಯಿತು ಮತ್ತು ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಲಾಯಿತು.

Indigo Flight 6e 56 Operating From Mumbai To Jeddah Received A Bomb Threat

Related Stories