ಇವಿ ಚಾರ್ಜಿಂಗ್ ಸ್ಟೇಷನ್ ಶಾರ್ಟ್ ಸರ್ಕ್ಯೂಟ್‌ನಿಂದ 7 ಮಂದಿ ಸಜೀವ ದಹನ
Indore Fire Blast: ಇಂಡೋರ್‌ನ ನಿವಾಸಿ ಕಟ್ಟಡದಲ್ಲಿ ಈವಿ ಕಾರು ಚಾರ್ಜಿಂಗ್ ವೇಳೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ವ್ಯಾಪಿಸಿ, ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಭಾರೀ ದುರಂತ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಸಜೀವ ದಹನಗೊಂಡು ಮೂವರು ಗಾಯಗೊಂಡಿದ್ದಾರೆ.

Indore Fire Blast: ಮಧ್ಯಪ್ರದೇಶದ ಇಂಡೋರ್ ನಗರದಲ್ಲಿ ನಡೆದ ಭೀಕರ ಅಗ್ನಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ ಸುಮಾರು ನಾಲ್ಕು ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಬಂಗಾಳಿ ಸ್ಕ್ವೇರ್ ಸಮೀಪದ ಮೂರು ಮಹಡಿಗಳ ನಿವಾಸಿ ಕಟ್ಟಡದ ಸೆಲ್ಲಾರ್‌ನಲ್ಲಿ ನಿಲ್ಲಿಸಿದ್ದ ಎಲೆಕ್ಟ್ರಿಕ್ ವಾಹನ (ಈವಿ) ಚಾರ್ಜಿಂಗ್ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದರ ಪರಿಣಾಮವಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲವೇ ಕ್ಷಣಗಳಲ್ಲಿ ಕಟ್ಟಡದ ಬೇರೆ ಭಾಗಗಳಿಗೆ ವ್ಯಾಪಿಸಿದೆ.
ಕಟ್ಟಡದಲ್ಲಿರುವ ಒಂದು ಮನೆಯಲ್ಲಿ 12 ಕ್ಕೂ ಹೆಚ್ಚು ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿದ್ದರಿಂದ ಪರಿಸ್ಥಿತಿ ಮತ್ತಷ್ಟು ಭೀಕರಗೊಂಡಿತು. ಬೆಂಕಿ ಅವುಗಳಿಗೆ ತಲುಪುತ್ತಿದ್ದಂತೆಯೇ ಸತತವಾಗಿ ಹಲವಾರು ಸಿಲಿಂಡರ್‌ಗಳು ಸ್ಫೋಟಗೊಂಡವು. ಸ್ಫೋಟದ ಭೀಕರ ಶಬ್ದದಿಂದ ಸುತ್ತಮುತ್ತಲಿನ ಪ್ರದೇಶವೇ ನಡುಗಿದಂತಾಯಿತು.
ಬೆಂಕಿ ಹೊತ್ತಿಕೊಂಡ ಪರಿಣಾಮ ವಿದ್ಯುತ್ ಸರಬರಾಜು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಂಡಿತು. ಇದರಿಂದ ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ಡೋರ್ ಲಾಕ್ ತೆರೆಯದೆ ಒಳಗಿದ್ದವರು ಸಿಲುಕಿಕೊಂಡರು. ಪರಿಣಾಮವಾಗಿ ಹಲವರು ಹೊರಬರಲು ಸಾಧ್ಯವಾಗದೆ ಬೆಂಕಿಯಲ್ಲಿ ಸಿಲುಕಿದರು.
ಈ ದುರ್ಘಟನೆಯಲ್ಲಿ ಒಟ್ಟು ಏಳು ಮಂದಿ ಸಜೀವ ದಹನಗೊಂಡಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ದೀರ್ಘ ಸಮಯದ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿಗೆ ಬಂದಿದ್ದ ಕೆಲವು ಬಂಧುಗಳು ಕೂಡ ಅಲ್ಲೇ ತಂಗಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ದುರ್ಘಟನೆ ಕುರಿತು ಇಂಡೋರ್ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಘಟನೆಗೆ ಕಾರಣಗಳ ಬಗ್ಗೆ ಸಂಪೂರ್ಣ ತನಿಖೆ ಆರಂಭಿಸಲಾಗಿದೆ.
Breaking
Tragedy in Indore, Madhya Pradesh
A short circuit during electric car charging sparked a fire.
7 people lost their lives as nearby cylinders exploded.
Is safety just an afterthought in the rush for electric vehicles?@Abhimanyu1305 pic.twitter.com/YbBoudELEW— @Moini (@moini_565) March 18, 2026



