ಇಂದೋರ್‌ನಲ್ಲಿ ಡೆಂಗ್ಯೂ ಜ್ವರ, ಸಾವಿರಕ್ಕೂ ಹೆಚ್ಚು ಪ್ರಕರಣಗಳು

ಮಧ್ಯಪ್ರದೇಶ ರಾಜ್ಯದ ಇಂದೋರ್ ನಗರದಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಇಂದೋರ್ ನಗರದಲ್ಲಿ ಶುಕ್ರವಾರ ಒಂದೇ ದಿನದಲ್ಲಿ ಹತ್ತು ಮಕ್ಕಳು ಸೇರಿದಂತೆ 21 ಮಂದಿಗೆ ಡೆಂಗ್ಯೂ ಸೋಂಕು ತಗುಲಿದೆ. 

🌐 Kannada News :

ಇಂದೋರ್ (ಮಧ್ಯಪ್ರದೇಶ): ಮಧ್ಯಪ್ರದೇಶ ರಾಜ್ಯದ ಇಂದೋರ್ ನಗರದಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಇಂದೋರ್ ನಗರದಲ್ಲಿ ಶುಕ್ರವಾರ ಒಂದೇ ದಿನದಲ್ಲಿ ಹತ್ತು ಮಕ್ಕಳು ಸೇರಿದಂತೆ 21 ಮಂದಿಗೆ ಡೆಂಗ್ಯೂ ಸೋಂಕು ತಗುಲಿದೆ.

ಇಂದೋರ್ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಬಿ.ಎಸ್.ಸೆಟಿಯಾ ಮಾತನಾಡಿ, ಮಳೆನೀರು ನಿಲ್ಲುವ ಪ್ರದೇಶಗಳ ಸುತ್ತಮುತ್ತ ವಾಸಿಸುವ ಜನರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಇಂದೋರ್‌ನಲ್ಲಿ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 1000 ತಲುಪಿದೆ. ನೀರು ನಿಲ್ಲುವುದರಿಂದ ಸೊಳ್ಳೆಗಳು ಹರಡಿ ಜನ ಡೆಂಗ್ಯೂ ಜ್ವರಕ್ಕೆ ತುತ್ತಾಗುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಇಂದೋರ್ ಜಿಲ್ಲೆಯ ಆಸ್ಪತ್ರೆಗಳಲ್ಲಿ 15 ಮಂದಿ ಡೆಂಗ್ಯೂ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಡೆಂಗ್ಯೂ ಹರಡದಂತೆ ಕಾರ್ಯಾಚರಣೆ ನಡೆಸಲಾಗಿದೆ.

➟ ☞ Kannada News Today ಸುದ್ದಿಗಾಗಿ FacebookTwitter ಅನುಸರಿಸಿ. Google News | News App ಡೌನ್ಲೋಡ್ ಮಾಡಿಕೊಳ್ಳಿ.
Scroll Down To More News Today