Amarnath Floods ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತ !
Amarnath Floods: ಭಾರೀ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಅಮರನಾಥ ಪ್ರದೇಶದಲ್ಲಿ ಶುಕ್ರವಾರ ಹಠಾತ್ ಪ್ರವಾಹ ಉಂಟಾಗಿದೆ. ಇದುವರೆಗೆ 16 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 40 ಮಂದಿ ನಾಪತ್ತೆಯಾಗಿದ್ದಾರೆ. ಆದರೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಐಟಿಬಿಪಿ ತಿಳಿಸಿದೆ. ಗುಡ್ಡಗಾಡು ಪ್ರದೇಶಗಳಿಂದ ಏಕಾಏಕಿ ನೀರು ಹರಿದು ಬರುತ್ತಿದೆ, ಯಾತ್ರಾರ್ಥಿಗಳನ್ನು ರಕ್ಷಿಸಲು ಕ್ರಮಕೈಗೊಂಡಿವೆ ಎಂದು ಅವರು ಹೇಳಿದರು.
10-15 ನಿಮಿಷಗಳಲ್ಲಿ ಯಾತ್ರಾರ್ಥಿಗಳನ್ನು ಟೆಂಟ್‌ಗಳಿಂದ ತೆರವುಗೊಳಿಸಲಾಯಿತು ಮತ್ತು ಅನೇಕ ಟೆಂಟ್‌ಗಳು ಪ್ರವಾಹದಲ್ಲಿ ಕೊಚ್ಚಿಹೋಗಿವೆ ಎಂದು ಪಿಆರ್‌ಒ ತಿಳಿಸಿದ್ದಾರೆ. ನದಿಯಲ್ಲಿ ಕೊಚ್ಚಿ ಹೋಗಿದ್ದ ಕೆಲವರನ್ನು ರಕ್ಷಿಸಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು. ಪ್ರವಾಹ ಸಂತ್ರಸ್ತರಿಗೆ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಅಮರನಾಥದಲ್ಲಿ ಇನ್ನೂ ಮಳೆಯಾಗುತ್ತಿದ್ದು, ಅಗತ್ಯ ಬಿದ್ದರೆ ರಾತ್ರಿಯಾದರೂ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಲಾಗಿದೆ. ಪ್ರವಾಹದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಹವಾಮಾನ ಅನುಕೂಲಕರವಾದರೆ ನಾಳೆ ಯಾತ್ರೆಯನ್ನು ಪುನರಾರಂಭಿಸಲಾಗುವುದು ಎಂದು ತಿಳಿಸಿದರು.