ಭೀಕರ ಅಪಘಾತ: ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ, 7 ಮಂದಿ ಸಾವು
ಮಧ್ಯಪ್ರದೇಶದ ಜಬಲ್ಪುರ-ಪ್ರಯಾಗ್‌ರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂಭಮೇಳದಿಂದ ಮರಳುತ್ತಿದ್ದವರ ಮಿನಿ ಬಸ್ ಲಾರಿಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.
- ಮಿನಿ ಬಸ್ ಮತ್ತು ಸಿಮೆಂಟ್ ಲಾರಿ ನಡುವೆ ಭೀಕರ ಅಪಘಾತ
- ಆಂಧ್ರಪ್ರದೇಶದ 7 ಮಂದಿಯ ದುರ್ಮರಣ, ಹಲವರಿಗೆ ಗಾಯ
- ಮುಂದುವರಿದ ರಕ್ಷಣಾ ಕಾರ್ಯಾಚರಣೆ
Jabalpur Road Accident : ಮಧ್ಯಪ್ರದೇಶದ ಜಬಲ್ಪುರ-ಪ್ರಯಾಗ್‌ರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಜನರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮಿನಿ ಬಸ್ ಮತ್ತು ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮಿನಿ ಬಸ್‌ನಲ್ಲಿದ್ದವರು ಕುಂಭಮೇಳದಲ್ಲಿ ಭಾಗವಹಿಸಿ ಮರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಆಂಧ್ರಪ್ರದೇಶದಿಂದ ಬಂದಿದ್ದ ಪ್ರಯಾಣಿಕರು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂಬುದಾಗಿ ವರದಿಯಾಗಿದೆ.
ಎತ್ತಿನಬಂಡಿಗೆ ಬೈಕ್ ಡಿಕ್ಕಿ ಮೂವರು ಯುವಕರು ಸ್ಥಳದಲ್ಲೇ ದುರ್ಮರಣ
ಜಬಲ್ಪುರ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಅಪಘಾತದಲ್ಲಿ ಮೃತಪಟ್ಟವರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ. ಅವರನ್ನು ಗುರುತಿಸಿದ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ನೀಡಿದ ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO) ಪಾರುಲ್ ಶರ್ಮಾ, “ಬೆಳಿಗ್ಗೆ 9 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಬಸ್ ಹಾಗೂ ಲಾರಿ ಪರಸ್ಪರ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಎರಡನೇ ವಾಹನದಲ್ಲಿದ್ದ ಕೆಲ ಪ್ರಯಾಣಿಕರು ಕೂಡ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ,” ಎಂದು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ಪ್ರದೇಶ ಸೇತುವೆಯ ಬಳಿ ಇದ್ದ ಕಾರಣ ರಕ್ಷಣಾ ಕಾರ್ಯಾಚರಣೆಗಳನ್ನು ಜಟಾಪಟಿಯಾಗಿ ನಡೆಸಲಾಗುತ್ತಿದೆ. ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸಲು ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.
Jabalpur Road Accident, 7 Killed in Bus-Truck Collision
Our Whatsapp Channel is Live Now 👇