JP Nadda: ಬಿಜೆಪಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅವಧಿ ವಿಸ್ತರಣೆ
JP Nadda: ಬಿಜೆಪಿ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅವಧಿ ವಿಸ್ತರಣೆ, ನಡ್ಡಾ ನೇತೃತ್ವದಲ್ಲಿ 2024 ರ ಲೋಕಸಭೆ ಚುನಾವಣೆ
JP Nadda: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆಪಿ ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸಲು (JP Nadda term as BJP president extended) ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ನಿರ್ಧಾರ (BJP party’s national executive) ಕೈಗೊಂಡಿದೆ. ಮಂಗಳವಾರ ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ (national executive meeting held in Delhi). ಜೂನ್ 2024 ರವರೆಗೆ ಜೆಪಿ ನಡ್ಡಾ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah announced) ಘೋಷಿಸಿದರು.
ಮುಂಬರುವ ಚುನಾವಣೆಯಲ್ಲಿ ಮೋದಿ ಮತ್ತು ನಡ್ಡಾ ನಾಯಕತ್ವದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಇದರೊಂದಿಗೆ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ನಡ್ಡಾ ನೇತೃತ್ವದಲ್ಲಿ ನಡೆಯುವುದು ಸ್ಪಷ್ಟವಾಗಿದೆ. ಮತ್ತೊಂದೆಡೆ, ಈ ವರ್ಷ 9 ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಅದೂ ಕೂಡ ಮೋದಿ ಮತ್ತು ನಡ್ಡಾ ನೇತೃತ್ವದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ದೇಶಾದ್ಯಂತ ಬಿಜೆಪಿ ಜನಪ್ರಿಯತೆಯನ್ನು ಹೆಚ್ಚಿಸುವಲ್ಲಿ ಜೆಪಿ ನಡ್ಡಾ ಅವರ ಪಾತ್ರವನ್ನು ಅಮಿತ್ ಶಾ ಶ್ಲಾಘಿಸಿದರು. ಕೋವಿಡ್ ಸಮಯದಲ್ಲಿ ಜೆಪಿ ನಡ್ಡಾ ಅನೇಕ ಪರಿಹಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು ಎಂದು ಅಮಿತ್ ಶಾ ನೆನಪಿಸಿದರು. ಇಂದಿನ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಅಮಿತ್ ಶಾ ಬಹಿರಂಗಪಡಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಬಿಜೆಪಿ 2019ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ಇಂದು ಮುಕ್ತಾಯವಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ (Prime Minister Narendra Modi), ಅಮಿತ್ ಶಾ, ಜೆಪಿ ನಡ್ಡಾ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಜೈಶಂಕರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.
JP Nadda term as BJP president extended
Follow us On
Google News |
Advertisement