ಗ್ರೆನೇಡ್‌ಗಳಿಂದ ಉಗ್ರರ ದಾಳಿ.. ಇಬ್ಬರು ಯೋಧರಿಗೆ ಗಂಭೀರ ಗಾಯ

Diabetes Mistakes, ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪಲ್ಹಾಲನ್ ಚೌಕ್‌ನಲ್ಲಿ ಭಾರತೀಯ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್‌ಗಳನ್ನು ಎಸೆದಿದ್ದಾರೆ. 

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪಲ್ಹಲ್ಲಾನ್ ಚೌಕ್‌ನಲ್ಲಿ ಭಾರತೀಯ ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್‌ಗಳನ್ನು ಎಸೆದಿದ್ದಾರೆ.

ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಸೇರಿದಂತೆ ನಾಲ್ವರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಸೈನಿಕರು ಮತ್ತು ನಾಗರಿಕರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

“ಬೆಳಿಗ್ಗೆ 11:15 ರ ಸುಮಾರಿಗೆ, ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಪಲ್ಹಲ್ಲಾನ್ ಚೌಕ್ ಬಳಿ ಭಯೋತ್ಪಾದಕರು ಗ್ರೆನೇಡ್ ಎಸೆದರು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗ್ರೆನೇಡ್ ದಾಳಿ ನಡೆದ ಪ್ರದೇಶವನ್ನು ಸೇನೆ ವಶಪಡಿಸಿಕೊಂಡಿದೆ. ಭಯೋತ್ಪಾದಕರ ಪತ್ತೆಗೆ ಸೈನಿಕರು ಪಥಸಂಚಲನ ನಡೆಸಿದರು.