ಕ್ಯಾಪ್ಟನ್ ಅಮರಿಂದರ್ ಮೋದಿಗೆ ಧನ್ಯವಾದ ಅರ್ಪಿಸಿದರು

ಗುರುನಾನಕ್ ಜಯಂತಿ ಆಚರಣೆಗೂ ಮುನ್ನ ಕರ್ತಾರ್‌ಪುರ ಕಾರಿಡಾರ್‌ಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಧನ್ಯವಾದ ಹೇಳಿದ್ದಾರೆ. ಸಾವಿರಾರು ಭಕ್ತರು ಭೇಟಿ ನೀಡಲು ಸಕಾಲದಲ್ಲಿ ತೆರೆಯಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಚಂಡೀಗಢ: ಗುರುನಾನಕ್ ಜಯಂತಿ ಆಚರಣೆಗೂ ಮುನ್ನ ಕರ್ತಾರ್‌ಪುರ ಕಾರಿಡಾರ್‌ಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಧನ್ಯವಾದ ಹೇಳಿದ್ದಾರೆ. ಸಾವಿರಾರು ಭಕ್ತರು ಭೇಟಿ ನೀಡಲು ಸಕಾಲದಲ್ಲಿ ತೆರೆಯಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮಂಗಳವಾರ ಟ್ವೀಟ್ ಮಾಡಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್, “ಕರ್ತಾರ್‌ಪುರ ಸಾಹಿಬ್ ಕಾರಿಡಾರ್ ಅನ್ನು ಸಮಯೋಚಿತವಾಗಿ ತೆರೆದಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು ತಿಳಿಸುತ್ತೇನೆ. ಗುರುನಾನಕ್ ದೇವ್ ಜಿ ಗುರು ಪರಬ್ ಸಂದರ್ಭದಲ್ಲಿ ಸಾವಿರಾರು ಭಕ್ತರು ಈ ಪವಿತ್ರ ದೇಗುಲದಲ್ಲಿ ಪೂಜೆ ಸಲ್ಲಿಸಲು ಅವಕಾಶ ಆಗಿದೆ ಎಂದರು.

ನವೆಂಬರ್ 19 ರಂದು ಗುರುನಾನಕ್ ಜಯಂತೋತ್ಸವ ನಡೆಯಲಿದೆ. ಈ ಹಿಂದೆ, ಕ್ಯಾಪ್ಟನ್ ಸಿಂಗ್ ಅವರು ನವೆಂಬರ್ 19 ರ ಮೊದಲು ಕರ್ತಾರ್‌ಪುರ ಕಾರಿಡಾರ್ ಅನ್ನು ತೆರೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೇಳಿದ್ದರು, ನಂತರ, ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬುಧವಾರದಿಂದ ಅದನ್ನು ತೆರೆಯಲು ನಿರ್ಧರಿಸಿದೆ ಎಂದು ಘೋಷಿಸಿದರು.

ಕರ್ತಾರ್‌ಪುರ ಕಾರಿಡಾರ್‌ನ ಉದ್ದ 4.7 ಕಿ.ಮೀ. ಸಿಖ್ಖರು ಈ ಕಾರಿಡಾರ್ ಮೂಲಕ ಪಾಕಿಸ್ತಾನದ ಗುರುದ್ವಾರ ದರ್ಬಾರ್ ಸಾಹಿಬ್‌ಗೆ ಪ್ರಯಾಣಿಸುತ್ತಾರೆ. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಇದನ್ನು ಮುಚ್ಚಲಾಗಿತ್ತು.