ಡಿಸೆಂಬರ್ 12 ರಂದು ಜೈಪುರದಲ್ಲಿ ಕಾಂಗ್ರೆಸ್ ಮೆಗಾ ರ್ಯಾಲಿ

ಮೋದಿ ಸರ್ಕಾರದ ಅವಧಿಯಲ್ಲಿ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ಡಿಸೆಂಬರ್ 12 ರಂದು ಜೈಪುರದಲ್ಲಿ ಮೆಗಾ ರ್ಯಾಲಿ ನಡೆಸಲಿದೆ. 

ನವದೆಹಲಿ: ಮೋದಿ ಸರ್ಕಾರದ ಅವಧಿಯಲ್ಲಿ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ಡಿಸೆಂಬರ್ 12 ರಂದು (ನಾಳೆ) ಜೈಪುರದಲ್ಲಿ ಮೆಗಾ ರ್ಯಾಲಿ ನಡೆಸಲಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜಸ್ಥಾನ ಕಾಂಗ್ರೆಸ್ ಉಸ್ತುವಾರಿ ಅಜಯ್ ಮಾಕನ್ ಹೇಳಿದ್ದಾರೆ.

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸಿಎಂಗಳು, ಮಾಜಿ ಮುಖ್ಯಮಂತ್ರಿಗಳು ಮತ್ತು ಪಕ್ಷದ ಹಿರಿಯ ನಾಯಕರು ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು. ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತಾರೆಯೇ ಎಂಬುದು ಇನ್ನೂ ಬಹಿರಂಗವಾಗಿಲ್ಲ.

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೈಗೊಂಡಿರುವ ನೀತಿಗಳು ಮತ್ತು ನಿರ್ಧಾರಗಳು ದೇಶದಲ್ಲಿ ಹಣದುಬ್ಬರವನ್ನು ಹೆಚ್ಚಿಸುತ್ತಿವೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜಿವಾಲಾ ಹೇಳಿದ್ದಾರೆ.

ಮೋದಿ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು. ಸಣ್ಣ ಮತ್ತು ಮಧ್ಯಮ ಉದ್ದಿಮೆಗಳು ನೆಲಕಚ್ಚಿವೆ, ನಕ್ಸಲಿಸಂ ಮತ್ತು ಭಯೋತ್ಪಾದನೆ ಹರಡುತ್ತಿದೆ, ಕಪ್ಪುಹಣವನ್ನು ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ.5ಕ್ಕೆ ಏರಿಕೆಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕೋವಿಡ್ -19 ನಿಯಮಗಳಿಗೆ ಅನುಸಾರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜೈಪುರ ರ್ಯಾಲಿಯಲ್ಲಿ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ಹೇಳಿದ್ದಾರೆ.

Stay updated with us for all News in Kannada at Facebook | Twitter
Scroll Down To More News Today