ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ, 30 ದಿನಗಳಲ್ಲೆ ಶಿಕ್ಷೆ ವಿಧಿಸಿದ ನ್ಯಾಯಾಲಯ

ನಾಲ್ಕು ವರ್ಷದ ಬಾಲಕಿಯ ಮೇಲೆ (Rape Accused) ಅತ್ಯಾಚಾರ ಎಸಗಿದ ಆರೋಪಿಗೆ ನ್ಯಾಯಾಲಯವು 30 ದಿನಗಳಲ್ಲಿ ಶಿಕ್ಷೆ ವಿಧಿಸಿದೆ. ಆರೋಪಿಗೆ ಶಿಕ್ಷೆ ವಿಧಿಸಿದ ಗುಜರಾತ್ ನ ಸೂರತ್ ಪೋಕ್ಸೋ ವಿಶೇಷ ನ್ಯಾಯಾಲಯ (Surat Pokso Special Court in Gujarat) ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಸೂರತ್: ನಾಲ್ಕು ವರ್ಷದ ಬಾಲಕಿಯ ಮೇಲೆ (Rape Accused) ಅತ್ಯಾಚಾರ ಎಸಗಿದ ಆರೋಪಿಗೆ ನ್ಯಾಯಾಲಯವು 30 ದಿನಗಳಲ್ಲಿ ಶಿಕ್ಷೆ ವಿಧಿಸಿದೆ. ಆರೋಪಿಗೆ ಶಿಕ್ಷೆ ವಿಧಿಸಿದ ಗುಜರಾತ್ ನ ಸೂರತ್ ಪೋಕ್ಸೋ ವಿಶೇಷ ನ್ಯಾಯಾಲಯ (Surat Pokso Special Court in Gujarat) ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಉತ್ತರ ಪ್ರದೇಶ ಮೂಲದ ಅಜಯ್ ನಿಶಾದ್ ಎಂಬಾತ ಕಳೆದ ತಿಂಗಳು 12 ರಂದು ಸೂರತ್‌ನ ಸಚಿನ್ ಡಿಐಡಿಸಿ ಪ್ರದೇಶದಲ್ಲಿ ತನ್ನ ಮನೆಯ ಮುಂದೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದ. ನಂತರ ಆಕೆಯನ್ನು ಕೊಂದು ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾನೆ. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಕ್ಟೋಬರ್ 13ರಂದು ಅಜಯ್ ನಿಶಾದ್ ನನ್ನು ಬಂಧಿಸಿದ್ದರು.

ಹತ್ತು ದಿನಗಳಲ್ಲಿ ಆರೋಪಿಗಳ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯವು ಅಕ್ಟೋಬರ್ 25 ರಿಂದ ಐದು ದಿನಗಳಲ್ಲಿ ಪ್ರಕರಣವನ್ನು ಮುಕ್ತಾಯಗೊಳಿಸಿತು.

ವಿಶೇಷ ನ್ಯಾಯಾಧೀಶ ಪಿ.ಎಸ್.ಕಲಾ ಅವರು ಗುರುವಾರ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಅದೇ ರೀತಿ ಗುಜರಾತ್‌ನ ವಿಚಾರಣಾ ನ್ಯಾಯಾಲಯ ಇಷ್ಟು ಕಡಿಮೆ ಅವಧಿಯಲ್ಲಿ ಇಂತಹ ತೀರ್ಪು ನೀಡಿರುವುದು ಇದೇ ಮೊದಲು.