Welcome To Kannada News Today

ದೆಹಲಿಯಲ್ಲಿ ಒಂದು ವಾರ ಶಾಲೆಗಳು ರಜೆ, ನೌಕರರಿಗೆ ವರ್ಕ್ ಫ್ರಮ್ ಹೋಮ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಳ್ಳುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹವಾಮಾನ ಪರಿಸ್ಥಿತಿಗಳ ಕುರಿತು ಶನಿವಾರ ತುರ್ತು ಸಭೆ ಕರೆದಿದ್ದಾರೆ. 

ಈ ಸಂದರ್ಭದಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಭೆಯ ನಂತರ ಮಾಧ್ಯಮಗಳಿಗೆ ವಿವರಗಳನ್ನು ಬಹಿರಂಗಪಡಿಸಲಾಯಿತು. 

ಸೋಮವಾರದಿಂದ ಒಂದು ವಾರದವರೆಗೆ ಶಾಲೆಗಳು ನೇರ ತರಗತಿಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಲಾಗಿದೆ. ಮಕ್ಕಳಿಗೆ ತೊಂದರೆಯಾಗದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. 

ಇದೇ 14ರಿಂದ 17ರ ನಡುವೆ ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

ಸರ್ಕಾರಿ ಮತ್ತು ಖಾಸಗಿ ಕಚೇರಿಗಳು ಸಾಧ್ಯವಾದಷ್ಟು ವರ್ಕ್‌ಫ್ರಮ್ ಹೋಮ್ ಪಾಲಿಸಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು. 

ಸರ್ಕಾರಿ ಕಛೇರಿಗಳು ಒಂದು ವಾರದ ಸಂಪೂರ್ಣ ವರ್ಕ್‌ ಫ್ರಮ್ ಹೋಮ್ ಪಾಲಿಸಿಯಲ್ಲಿ ಕೆಲಸ ಮಾಡಬೇಕು, ಖಾಸಗಿ ಕಚೇರಿಗಳು ಉದ್ಯೋಗಿಗಳಿಗೆ ಸಾಧ್ಯವಾದಷ್ಟು ವರ್ಕ್‌ಫ್ರಮ್ ನೀಡಬೇಕು ಎಂದು ಸೂಚಿಸಲಾಗಿದೆ.

 ದೆಹಲಿಯಲ್ಲಿ ಎರಡು ದಿನಗಳ ಕಾಲ ಲಾಕ್‌ಡೌನ್ ಮಾಡುವ ಸುಪ್ರೀಂ ಕೋರ್ಟ್ ಸಲಹೆಯನ್ನು ಪರಿಗಣಿಸಲಾಗುತ್ತಿದೆ ಎಂದು ಅವರು ಹೇಳಿದರು. ಕೇಂದ್ರದೊಂದಿಗೆ ಚರ್ಚಿಸಿ ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.

Get All India News & Stay updated for Kannada News Trusted News Content